ಲೈಂಗಿಕ ಕಿರುಕುಳ ಆರೋಪ ಸಾಬೀತಾದ್ರೆ ನಾನೇ ನೇಣು ಹಾಕ್ಕೋತೀನಿ: ಬ್ರಿಜ್ ಭೂಷಣ್

By
1 Min Read

ನವದೆಹಲಿ: ಭಾರತೀಯ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳನ್ನು ಮತ್ತೊಮ್ಮೆ ತಳ್ಳಿ ಹಾಕಿರುವ ಭಾರತೀಯ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಬಿಗಿಗುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ದೇಶದಲ್ಲಿ ಕುಸ್ತಿಗಾಗಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆರೋಪ ಹೊರಿಸಿದರವರಲ್ಲಿ ನನ್ನ ವಿರುದ್ಧದ ಸಾಕ್ಷಿಯಾಗಿ ಯಾವುದೇ ವೀಡಿಯೋ ಅಥವಾ ಆಡಿಯೋಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಸೇರಿದಂತೆ ಭಾರತದ ಪ್ರಮುಖ ಕುಸ್ತಿಪಟುಗಳು ಕಳೆದ 2 ವಾರಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾತ್ರವಲ್ಲದೆ ತನಿಖೆ ನಡೆಸಿದ ಮೇಲ್ವಿಚಾರಣಾ ಸಮಿತಿಯ  ವರದಿಯನ್ನು  ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: RSS ಹಿನ್ನೆಲೆಯ ಶೆಟ್ಟರ್ ಪರ ಸೋನಿಯಾ ಗಾಂಧಿ ಪ್ರಚಾರ: ಓವೈಸಿ ಕಿಡಿ

ದೆಹಲಿ ಪೊಲೀಸರು ಈ ಆರೋಪಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 28 ರಂದು 2 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ಐಪಿಸಿ ಸೆಕ್ಷನ್ 354 (ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಕೃತ್ಯ), 354 ಎ (ಲೈಂಗಿಕ ಕಿರುಕುಳ), ಮತ್ತು 354 ಡಿ (ಹಿಂಬಾಲಿಸುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಲಾದ ಘಟನೆಗಳು 2012-2022ರ ನಡುವೆ ವಿದೇಶ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆದಿವೆ ಎನ್ನಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ಹಿಮಪಾತ – ಮೂವರು ಸಾವು, 9 ಮಂದಿಗೆ ಗಾಯ

Share This Article