ಫುಡ್ ಡೆಲಿವರಿ ಬಾಯ್ ಜೊತೆ ರಾಹುಲ್ ಗಾಂಧಿ ಬೈಕ್‍ ರೈಡ್‌

Public TV
1 Min Read

ಬೆಂಗಳೂರು: ಸೆಕ್ಯುರಿಟಿ ಬಿಟ್ಟು ಫುಡ್ ಡೆಲಿವರಿ ಬಾಯ್ ಜೊತೆ ಕಾಂಗ್ರೆಸ್ (Congress) ಮುಖಂಡ ರಾಹುಲ್ ಗಾಂಧಿ (Rahul Gandhi) ಬೈಕ್‍ನಲ್ಲಿ (Bike) ಸಂಚರಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಗೆ 3 ದಿನಗಳು ಬಾಕಿಯಿದೆ. ನಾಳೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರೀಯ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಚಾರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹೌದು ದ್ವಿಚಕ್ರ ವಾಹನದಲ್ಲಿ ಡೆಲಿವರಿ ಬಾಯ್ ಜೊತೆ ಬೆಂಗಳೂರಿನಲ್ಲಿ ಸುತ್ತಾಟ ನಡೆಸಿದ್ದು, ಏರ್‌ಲೈನ್ಸ್ ಹೋಟೆಲ್ ಅಲ್ಲಿ ರಾಹುಲ್ ಗಾಂಧಿ ತಿಂಡಿ ಸವಿದರು. ಫುಡ್ ಡೆಲಿವರಿ ಬಾಯ್ ಜೊತೆ ಏರ್‌ಲೈನ್ಸ್ ಹೋಟೆಲ್, ಚಿನ್ನಸ್ವಾಮಿ, ರಾಜಭವನ ರಸ್ತೆಯಲ್ಲಿ ಸಂಚಾರ ನಡೆಸಿದರು. ಇದನ್ನೂ ಓದಿ: ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರು, ನಾವು ಪ್ರಿಂಟ್‌ ಮಾಡಿದ್ದೇವೆ: ಡಿಕೆಶಿ

ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ಎಸ್‍ಸಿಜೆ ಆಸ್ಪತ್ರೆಯಲ್ಲಿ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮಾನ್ ಚಾಂಡಿ ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದರು. ಅನಾರೋಗ್ಯದಿಂದ ಬಳಲುತ್ತಿರುವ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮಾನ್ ಚಾಂಡಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಉಮ್ಮಾನ್ ಚಾಂಡಿ ಅವರ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ IT ರೇಡ್ – ಕೋಟಿ ಕೋಟಿ ಹಣ ಸೀಜ್

Share This Article