ಬಿಜೆಪಿ ಅಭಿವೃದ್ಧಿ, ಕಾಂಗ್ರೆಸ್‌ನ ಒಡೆದು ಆಳುವ ನೀತಿ ನಡುವೆ ಚುನಾವಣೆ ನಡೆಯುತ್ತಿದೆ: ಬೊಮ್ಮಾಯಿ

By
1 Min Read

ಹಾವೇರಿ: ಈ ಬಾರಿಯ ಚುನಾವಣೆ (Election)  ಬಿಜೆಪಿಯ (BJP) ಅಭಿವೃದ್ಧಿ ಹಾಗೂ ಕಾಂಗ್ರೆಸ್‌ನ (Congress) ಒಡೆದು ಆಳುವ ನೀತಿಯ ನಡುವೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಶಿಗ್ಗಾಂವಿ (Shiggavi) ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಈ ಬಾರಿ ಚುನಾವಣೆಯನ್ನು ನಾವ್ಯಾರೂ ಮಾಡುತ್ತಿಲ್ಲ. ಜನರೇ ಸ್ವಯಂ ಪ್ರೇರಿತರಾಗಿ ಪ್ರಚಾರ ಮಾಡುತ್ತಿದ್ದಾರೆ. ಎಲ್ಲಾ ಹಳ್ಳಿಗಳಲ್ಲಿ ಹಬ್ಬದ ವಾತಾವರಣವಿದೆ. ವಿಶೇಷವಾಗಿ ತಾಯಂದಿರ ಉತ್ಸಾಹ, ಬೆಂಬಲ ನೋಡಿದರೆ ಯಾವುದೋ ಜನ್ಮದ ಪುಣ್ಯ ಅಂದುಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಮೇ 13ಕ್ಕೆ ಹನುಮಾನ್ ಗದಾ ಕಾಂಗ್ರೆಸ್ ಮೇಲೆ ಹೇಗೆ ಪ್ರಹಾರ ಮಾಡುತ್ತೆ ನೋಡಿ: ಭಗವಂತ್ ಖೂಬಾ

2018ರಲ್ಲಿ ನೀವು ಕೊಟ್ಟಿರುವ ಮತದ ಶಕ್ತಿ ಬಹಳ ದೊಡ್ಡದಿದೆ. ನಾನು ಶಾಸಕ, ಮಂತ್ರಿ ಹಾಗೂ ಸಿಎಂ ಕೂಡ ಆಗಿದ್ದೇನೆ. ಸಮ್ಮಿಶ್ರ ಸರ್ಕಾರ ಯಾವುದೇ ರೀತಿಯ ಕೆಲಸ ಮಾಡಲಿಲ್ಲ. ನಂತರ ಬಂದ ಬಿಜೆಪಿ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ನನ್ನ ಕೊನೆಯ ಚುನಾವಣೆ, ಆದರೆ ಸಕ್ರಿಯ ರಾಜಕೀಯದಲ್ಲಿರುತ್ತೇನೆ: ಜಗದೀಶ್ ಶೆಟ್ಟರ್

ಯಶಸ್ವಿಯಾಗಿ ಕೋವಿಡ್ (Covid) ನಿರ್ವಹಣೆ ಮಾಡಿದ್ದೇವೆ. ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಿದ್ದೇವೆ. ಈ ಬಾರಿ ಎಲ್ಲ ತರಹದ ಮನೆ ನಿರ್ಮಾಣಕ್ಕೂ ಐದು ಲಕ್ಷ ರೂ. ಅನುದಾನ ನೀಡಲಾಗುವುದು. ನನ್ನ ಕ್ಷೇತ್ರದಲ್ಲಿ ಸುಮಾರು 300 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದ್ದೇನೆ. ನಮ್ಮ ಕ್ಷೇತ್ರದಲ್ಲಿ ಐಟಿಐ (ITI) ನಿರ್ಮಾಣ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಹೆಣ್ಮಕ್ಕಳಿಗಾಗಿ ತಾಯಿ-ಮಗು ಆಸ್ಪತ್ರೆ ನಿರ್ಮಾಣ ಮಾಡ್ತೀವಿ – ಪ್ರಚಾರದ ಕೊನೇ ದಿನ ಡಿಕೆಶಿ ಗ್ಯಾರಂಟಿ

ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ಈ ಬಾರಿ ಬಿಜೆಪಿಯ ಗೆಲುವು ನಿಶ್ಚಿತವಾಗಿದೆ. ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮೋದಿಯವರಂಥ ನಾಯಕ ಸಿಕ್ಕಿರೋದು ನಮ್ಮ ಸೌಭಾಗ್ಯ: ಬಿಎಸ್‍ವೈ

Share This Article