ಮತದಾನ ಕೇಂದ್ರದ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

Public TV
1 Min Read

ಬಳ್ಳಾರಿ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ರಾಜ್ಯಾದ್ಯಂತ ಮತದಾನಕ್ಕೆ (Voting) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯುವ ಮತದಾರರು, ಶತಾಯುಷಿಗಳು, ನವ ವಧು-ವರರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇದೇ ರೀತಿ ಮತದಾನಕ್ಕೆಂದು ಬಂದಿದ್ದ ಮಹಿಳೆಗೆ ಮತದಾನ ಕೇಂದ್ರದಲ್ಲೇ ಹೆರಿಗೆ ಮಾಡಿಸಿರುವ ಘಟನೆ ಬಳ್ಳಾರಿಯಲ್ಲಿ (Ballary) ನಡೆದಿದೆ.

ಜಿಲ್ಲೆಯ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಂಬು ಗರ್ಭಿಣಿಯಾಗಿದ್ದ ಮಣಿಲಾಗೆ ಮತದಾನ ಕೇಂದ್ರದಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ವಿಶೇಷ ಚೇತನನಿಂದ ಮತದಾನ – ಕಾಲು ಬೆರಳಿಗೆ ಶಾಯಿ ಹಾಕಿದ ಅಧಿಕಾರಿಗಳು

ತಕ್ಷಣ ಆಕೆಯನ್ನು ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದೆ. ಅಷ್ಟರಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

Share This Article