ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆ

Public TV
1 Min Read

ಬೆಂಗಳೂರು: ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ (Congress) ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ (Election) ಸೋಲು, ಗೆಲುವು ಸಹಜವಾಗಿದೆ. ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಈ ಬಾರಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ (Result) ಬಹುತೇಕ ಖಚಿತವಾಗಿದೆ. ಈ ಬಾರಿ ಕಾಂಗ್ರೆಸ್‌ ಸ್ಪಷ್ಟ ಬಹುಮತದತ್ತ ದಾಪುಗಾಲು ಇಟ್ಟಿದೆ. ಸರ್ಕಾರ ರಚಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಭದ್ರಕೋಟೆ ಛಿದ್ರಗೊಳಿಸಿದ ಕೈ – ಕೊಡಗಿನಲ್ಲಿ ಬಿಜೆಪಿಗೆ ಹೀನಾಯ ಸೋಲು

Share This Article