ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

Public TV
0 Min Read

ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೆರಡು ದಿನ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಬೆಂಗಳೂರಿನಲ್ಲಿ (Bengaluru) ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ವೇಳೆಗೆ ಮಳೆ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

Share This Article