ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

Public TV
1 Min Read

ಬಳ್ಳಾರಿ: ಶಾಲೆ ಆರಂಭವಾದ ಎರಡನೆ ದಿನವೇ ಮಕ್ಕಳಿಗೆ ಶಾಕ್ ಎದುರಾಗಿದೆ. ಆಡಳಿತ ಮಂಡಳಿ ಮಾಡಿರುವ ಎಡವಟ್ಟಿನಿಂದ ಮಕ್ಕಳಿಗೆ ಸಮಸ್ಯೆಯಾಗಿದೆ.

ಹೌದು. ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಬ್ಯಾಂಕ್ ಸಿಬ್ಬಂದಿ ಶಾಲೆಯನ್ನೇ ಸೀಜ್ (School Seize) ಮಾಡಿದ ಘಟನೆಯೊಂದು ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿರುವ ರಾಜೀವ್ ಗಾಂಧಿ ಸ್ಮಾರಕ ವಿದ್ಯಾ ಸಂಸ್ಥೆ ಸೀಜ್ ಆಗಿರುವ ಸ್ಕೂಲ್. ಶಾಲೆ ಸೀಜ್ ಆಗಿರುವ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಯ ಹೊರಗಡೆ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ಬಂದಿದೆ.

ಎಂ. ಸವಿತಾ, ಎಂ ಕೃಷ್ಣಕಿಶೋರ್ ರೆಡ್ಡಿ, ಎಂ.ಸತ್ಯನಾರಾಣ ಸೇರಿದಂತೆ ಆಡಳಿತ ಮಂಡಳಿಯವರು ಶಾಲೆಯ ಮೇಲೆ ಸಾಲ ಪಡೆದಿದ್ದಾರೆ. ಆಂಧ್ರ ಮೂಲದ ಇನ್‍ಕ್ರೆಡ್ ಫೈನಾನ್ಸಿಯಲ್ ಸರ್ವೀಸ್ ಲಿಮಿಟೆಡ್‍ನಿಂದ ಒಂದು ಕೋಟಿಗೂ ಅಧಿಕ ಮೊತ್ತದ ಸಾಲವನ್ನು ಪಡೆದುಕೊಂಡಿದ್ದಾರೆ. ಆ ಬಳಿಕ ಸರಿಯಾಗಿ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ನ್ಯಾಯಲಯ (Court) ದಿಂದ ಆದೇಶ ತಂದು ಸೀಜ್ ಮಾಡಿದ್ದಾರೆ. ಇದನ್ನೂ ಓದಿ: ಸ್ಟೇಜ್‌ನಲ್ಲೇ ಎಡವಿ ಬಿದ್ದ US ಅಧ್ಯಕ್ಷ ಜೋ ಬೈಡನ್‌ – ವೀಡಿಯೋ ವೈರಲ್‌

ಆಡಳಿತ ಮಂಡಳಿ ಹಾಗೂ ಬ್ಯಾಂಕ್ (Bank) ನವರ ವ್ಯವಹಾರದಿಂದಾಗಿ ಇಂದು ಮಕ್ಕಳು ಪರದಾಡುವಂತಾಗಿದೆ. ಮಕ್ಕಳನ್ನು ಹೊರಗಡೆ ಕೂರಿಸದೇ ಬೇರೆಡೆ ವ್ಯವಸ್ಥೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಒಂದು ವೇಳೆ ವ್ಯವಸ್ಥೆ ಮಾಡದಿದ್ದರೆ ಕ್ರಮದ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ. ಇತ್ತ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಹಿಡಿ ಶಾಪ ಹಾಕುತ್ತಿದ್ದಾರೆ.

 

Share This Article