– ಕಣ್ಣಾಮುಚ್ಚಾಲೆ ಆಡುತ್ತಾ ಸಿಲುಕಿಕೊಂಡಿರೋ ಶಂಕೆ
ನವದೆಹಲಿ: ಇಬ್ಬರು ಮಕ್ಕಳು (Children) ನಾಪತ್ತೆಯಾದ ಕೆಲವೇ ಗಂಟೆಗಳ ಬಳಿಕ ಮನೆಯಲ್ಲೇ ಇದ್ದ ಮರದ ಪೆಟ್ಟಿಗೆಯೊಳಗೆ (Wooden Box) ಶವವಾಗಿ ಪತ್ತೆಯಾದ ಘಟನೆ ದೆಹಲಿಯ (Delhi) ಜಾಮಿಯಾ ನಗರ (Jamia Nagar) ಪ್ರದೇಶದಲ್ಲಿ ನಡೆದಿದೆ.
ನೀರಜ್ (8) ಮತ್ತು ಆರತಿ (6) ಶವವಾಗಿ ಪತ್ತೆಯಾಗಿರುವ ಮಕ್ಕಳು. ಇಬ್ಬರೂ ಸಹೋದರ – ಸಹೋದರಿಯಾಗಿದ್ದು, ಅದೇ ಮನೆಯಲ್ಲಿ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ತಮ್ಮ ತಂದೆ ಬಲ್ಬೀರ್ ಅವರೊಂದಿಗೆ ವಾಸಿಸುತ್ತಿದ್ದರು. ಮಕ್ಕಳಿಬ್ಬರೂ ಆಟವಾಡುತ್ತಾ ಪೆಟ್ಟಿಗೆಯೊಳಗೆ ಸೇರಿಕೊಂಡು ಬಳಿಕ ಹೊರಬರಲು ಸಾಧ್ಯವಾಗದೆ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ಮಕ್ಕಳು ತಮ್ಮ ಪೋಷಕರೊಂದಿಗೆ ಸುಮಾರು 3 ಗಂಟೆ ವೇಳಗೆ ಊಟ ಮುಗಿಸಿದ್ದು, 3:30ರ ವೇಳೆಗೆ ನಾಪತ್ತೆಯಾಗಿದ್ದಾರೆ. ಸ್ಥಳೀಯರು ಹಾಗೂ ಇತರ ಮಕ್ಕಳು ಅವರಿಬ್ಬರನ್ನೂ ಹುಡುಕಿದಾಗ ಮನೆಯಲ್ಲಿ ಇದ್ದ ಮರದ ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ
ಮಕ್ಕಳ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇರಲಿಲ್ಲ. ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಮರದ ಪೆಟ್ಟಿಗೆಯೊಳಗೆ ಸಿಲುಕಿಕೊಂಡು ಬಳಿಕ ಉಸಿರುಕಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಇದನ್ನೂ ಓದಿ: ಗಂಡು ಮಗುವಾಯ್ತು ಅಂತ ಪಾರ್ಟಿ ಕೊಡಿಸಿದವನ ತಲೆ ಬುರುಡೆ ಓಪನ್ ಮಾಡಿದ ಸ್ನೇಹಿತರು!