ಸಲ್ಮಾನ್ ಖಾನ್ ನಿರೂಪಣೆಯಲ್ಲಿ ಬಿಗ್ ಬಾಸ್ ಒಟಿಟಿ 2 ಪ್ರಸಾರ

Public TV
1 Min Read

ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss Hindi)) ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಸಲ್ಲು ನಿರೂಪಣೆಯ ಮೊದಲ ಬಿಗ್ ಬಾಸ್ ಒಟಿಟಿ ಯಶಸ್ವಿಯಾಗಿತ್ತು. ಈಗ 2ನೇ ಸೀಸನ್ ಬಿಗ್ ಬಾಸ್ ಒಟಿಟಿ ಮಾಡಲು ಪ್ಲ್ಯಾನ್ ಮಾಡಿದ್ದಾರೆ.

ಸಲ್ಮಾನ್ ಖಾನ್ (Salman Khan) ನಿರೂಪಣೆಯ ಬಿಗ್ ಬಾಸ್ ಒಟಿಟಿ ಕಾರ್ಯಕ್ರಮದ ಫಸ್ಟ್ ಪ್ರೋಮೋ ರಿವೀಲ್ ಆಗಿದೆ. ಸಲ್ಲು ಭಾಯ್ ಎಂಟ್ರಿಗೆ ಫ್ಯಾನ್ಸ್ ಬೋಲ್ಸ್ ಆಗಿದ್ದಾರೆ. ಜೂನ್ 17ರಿಂದ ಒಟಿಟಿ ಬಿಗ್ ಬಾಸ್ ಶುರುವಾಗಲಿದೆ. ಜಿಯೋ ಸಿನಿಮಾ ವೇದಿಕೆಯಲ್ಲಿ ಲೈವ್ ಸ್ಟ್ರೀಮ್ ಆಗಲಿದೆ.

ಮೊದಲ ಸೀಸನ್ ಬಿಗ್ ಬಾಸ್ ಒಟಿಟಿಯನ್ನ ಕರಣ್ ಜೋಹರ್ ನಿರೂಪಣೆ ಮಾಡಿದ್ದರು. ಆದರೆ 2ನೇ ಸೀಸನ್‌ನ ಸಲ್ಮಾನ್ ಖಾನ್ ನಿರೂಪಣೆ ಮಾಡುವ ಬಗ್ಗೆ ಅಧಿಕೃತ ಅಪ್‌ಡೇಟ್ ಹೊರಬಿದ್ದಿದೆ. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಮರಳಿದ ‘ಬಿಗ್‌ ಬಾಸ್‌’ ಚೈತ್ರಾ ಹಳ್ಳಿಕೇರಿ

ಕಳೆದ ಸೀಸನ್‌ನಲ್ಲಿ ದಿವ್ಯಾ ಅಗರ್‌ವಾಲ್ ವಿನ್ನರ್ ಆಗಿದ್ದರು. ಉರ್ಫಿ ಜಾವೇದ್, ನಿಶಾಂತ್ ಭಟ್, ಶಮಿತಾ, ಪ್ರತೀಕ್, ನೇಹಾ ಸೇರಿದಂತೆ ಹಲವು ಸ್ಪರ್ಧಿಗಳು ಭಾಗವಹಿಸಿದ್ದರು. ಬಿಗ್ ಬಾಸ್ 2ನೇ ಸೀಸನ್‌ನಲ್ಲಿ ಯಾರೆಲ್ಲಾ ಇರುತ್ತಾರೆ ಎಂಬುದಕ್ಕೆ ಜೂನ್ 17ರವರೆಗೂ ಕಾದುನೋಡಬೇಕಿದೆ.

Share This Article