ನಾನು ಭವಿಷ್ಯ ನುಡಿದಂತೆ ರೈಲು ದುರಂತ ಆಗಿದೆ; ದೇಶಕ್ಕೆ ಇನ್ನೊಂದು ಗಂಡಾಂತರ ಕಾದಿದೆ – ಕೋಡಿ ಮಠ ಶ್ರೀ ಭವಿಷ್ಯ

Public TV
1 Min Read

– ಸಿಎಂ ಸಿದ್ದು ಸರ್ಕಾರ ಶುಭ ಸೂಚನೆ ನೀಡಿದ ಸ್ವಾಮೀಜಿ

ಕೋಲಾರ: ದೇಶಕ್ಕೆ ಇನ್ನೂ ಒಂದು ಗಂಡಾಂತರ ಕಾದಿದೆ. ಈ ವರ್ಷ ಅಚಾನಕ್ಕಾಗಿ ಗುಡುಗು, ಮಿಂಚಿನ ಸಹಿತ ಮಳೆ ಬರಲಿದ್ದು, ಎರಡು-ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ (Kodi Mutt Shree) ಮತ್ತೊಂದು ಭವಿಷ್ಯ ನುಡಿದಿದ್ದಾರೆ.

ಕೋಲಾರ (Kolara) ತಾಲ್ಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ. ಅದರಂತೆ ರೈಲು ದುರಂತ ನಡೆದಿದೆ. ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 1 ಫೋನ್‌ ಕರೆ.. 9 ಅಧಿಕಾರಿಗಳು..; ಒಡಿಶಾ ರೈಲು ದುರಂತದ ಬಳಿಕ ಏನೇನಾಯ್ತು? – ಇಲ್ಲಿದೆ ಪಿನ್‌ ಟು ಪಿನ್‌ ಮಾಹಿತಿ

ಎಲ್ಲೋ ನಡೆದ ಬಾಂಬ್ ದಾಳಿಯಿಂದ ನಮಗೆ ಸಾಕಷ್ಟು ಅನಾಹುತ ಸಂಭವಿಸಲಿದೆ. ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ಈಗಾಗಲೆ ಸಿಕ್ಕಿದೆ. ಅದರಂತೆ ಬೆಟ್ಟದಲ್ಲಿ ಮೂನ್ಸೂಚನೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಆಧ್ಯಾತ್ಮಿಕವಾಗಿ ಅವರು (ಸರ್ಕಾರ) ನಡೆಯುತ್ತಿದ್ದಾರೆ. ಹಾಗಾಗಿ ಅವರಿಗೆ ಒಳ್ಳೆಯದಾಗಲಿ. ಅಧ್ಯಾತ್ಮ ಬಿಟ್ಟು ಹೋದ್ರೆ ಅವರಿಗೆ ದೈವವೇ ಉತ್ತರ ನೀಡಲಿದೆ ಎಂದು ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಈ ವರ್ಷವೇ ಪಠ್ಯ ಪುಸ್ತಕ ಪರಿಷ್ಕರಣೆ: ಮಧು ಬಂಗಾರಪ್ಪ ಸ್ಪಷ್ಟನೆ

Share This Article