ಚಲಿಸುತ್ತಿದ್ದ ಆಟೋಗೆ ಕಾರು ಡಿಕ್ಕಿ- ಇಬ್ಬರ ಸ್ಥಿತಿ ಗಂಭೀರ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮಾರ್ಕೆಟ್ ಫ್ಲೈಓವರ್ (Market Flyover) ಮೇಲೆ ಚಲಿಸುತ್ತಿದ್ದ ಕಾರ್ ಡಿಕ್ಕಿಯಾಗಿ ಆಟೋ (Auto Car Accident) ಸಂಪೂರ್ಣ ನಜ್ಜುಗುಜ್ಜಾಗಿಎ. ಪರಿಣಾಮ ಆಟೋ ಚಾಲಕ ಹಾಗೂ ಸಂಬಂಧಿಯೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯವಾಗಿರೋ ಇಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಆಟೋಗೆ ಕಾರು ಗುದ್ದಿದ ರಭಸಕ್ಕೆ ಕಾರಿನ ಎರಡು ಏರ್ ಬ್ಯಾಗ್ ಗಳು ಒಪನ್ ಆಗಿದ್ದು ಚಾಲಕ ಬಚಾವ್ ಆಗಿದ್ದಾನೆ. ಘಟನೆಯಲ್ಲಿ ಗಾಯವಾಗಿರೋ ವ್ಯಕ್ತಿಗೆ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಘಟನೆ ಸಂಬಂಧ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ- 2 ವರ್ಷದ ಹಸುಳೆಯನ್ನು ಕತ್ತು ಹಿಸುಕಿ ಕೊಂದ ಪಾಪಿ ತಂದೆ

Share This Article