ಬೈಕ್‌ ಸ್ಕಿಡ್‌ ಆಗಿ ಡಿವೈಡರ್‌ಗೆ ಡಿಕ್ಕಿ – ಕಾನೂನು ವಿದ್ಯಾರ್ಥಿ ದುರ್ಮರಣ

Public TV
1 Min Read

ಶಿವಮೊಗ್ಗ: ಡಿವೈಡರ್‌ಗೆ (Divider) ಬೈಕ್‌ (Bike) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ (Shivamogga) ಶರಾವತಿ ನಗರದಲ್ಲಿ ನಡೆದಿದೆ.

ಮೃತ ಸವಾರನನ್ನು ಕಾಶಿಪುರ ನಿವಾಸಿ ಗೌತಮ್ (22) ಎಂದು ಗುರುತಿಸಲಾಗಿದೆ. ಈತ ಎನ್‌ಇಎಸ್ (NES) ಕಾಲೇಜಿನ ಲಾ ವಿದ್ಯಾರ್ಥಿಯಾಗಿದ್ದ. ಕಾಲೇಜಿನಲ್ಲಿ ಅಮೃತ ಮಹೋತ್ಸವ ಸಮಾರಂಭ ನಡೆಯುತ್ತಿದ್ದು, ಸಂಭ್ರಮಾಚರಣೆಯ ಸಿದ್ಧತೆಯಲ್ಲಿ ಭಾಗವಹಿಸಿದ್ದ ಈತ ನಸುಕಿನ ಜಾವ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಆತ್ಮೀಯ ಗೆಳೆಯನ ಜೊತೆಗೆ ತನ್ನ ಪತ್ನಿಯ ರಾಸಲೀಲೆ ನೋಡಿದ ಪತಿ ಮಟಾಶ್

ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಗೌತಮ್ ಗಂಭಿರ ಗಾಯಗೊಂಡಿದ್ದ. ಈತನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆಯ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಣೆಯಾದ ಕವಿತಾ ಶವವಾಗಿ ಪತ್ತೆ- ಗೆಳೆಯ ಸಲೀಂನಿಂದಲೇ ಹತ್ಯೆ

Share This Article