ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

Public TV
1 Min Read

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ಗಂಜಿಗಟ್ಟೆ ಗ್ರಾಮದ ನಿವಾಸಿ ಮಹಂತೇಶ್ (30) ಮೃತ ದುರ್ದೈವಿ. ಬೆಳಗ್ಗೆ ಚಿಕ್ಕಮ್ಮನಹಳ್ಳಿಯಿಂದ ಗಂಜಿಗಟ್ಟೆ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿರುವ ವಾಹನ ಈತನ ಬೈಕಿಗೆ ಡಿಕ್ಕಿಯಾಗಿರುವ ಸಾಧ್ಯತೆ ಇದೆ. ಇದನ್ನೂ ಓದಿ: ಶಾಲಾ ಮಕ್ಕಳ ಮೊಟ್ಟೆಗೆ ಕತ್ತರಿ ಹಾಕಿದ ಸರ್ಕಾರ

ಡಿಕ್ಕಿಯಿಂದಾಗಿ ಬೈಕ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು, ಡಿಕ್ಕಿಯ ರಭಸಕ್ಕೆ ಮಹಂತೇಶನ ಮೃತದೇಹ ರಸ್ತೆಯ ಪಕ್ಕಕ್ಕೆ ಬಿದ್ದಿದೆ. ಈ ಘಟನೆ ಸಂಭವಿಸಿದ ಬಳಿಕ ಅಪರಿಚಿತ ವಾಹನದ ಚಾಲಕ ವಾಹನ ಸಮೇತವಾಗಿ ಎಸ್ಕೇಪ್ ಆಗಿದ್ದಾನೆ. ಈ ಪ್ರಕರಣ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಎಸ್ಕೇಪ್ ಆಗಿರುವ ಚಾಲಕ ಹಾಗೂ ವಾಹನದ ಪತ್ತೆಗಾಗಿ ಬಲೆಬೀಸಿದ್ದಾರೆ. ಇದನ್ನೂ ಓದಿ: ಕಾಂಪೌಂಡ್ ಹತ್ತುವ ವೇಳೆ ಜಾರಿಬಿದ್ದು ವಿದ್ಯಾರ್ಥಿನಿ ಸಾವು

Share This Article