ಸ್ಪೈ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಬಂದು ದೋಸೆ ಚಪ್ಪರಿಸಿದ ನಟ ನಿಖಿಲ್

Public TV
2 Min Read

ಬೆಂಗಳೂರಿನ (Bangalore) ಸಿಟಿಆರ್ ಹೋಟೆಲ್ ದೋಸೆ ಇಂಡಿಯಾಗೆ ಫೇಮಸ್. ಈ ಹೋಟೆಲ್ ನಲ್ಲಿ ಬಂದ ಸೆಲೆಬ್ರಿಟಿಗಳೆಲ್ಲಾ ದೋಸೆ ರುಚಿ ಸವಿಯುತ್ತಾರೆ. ಅದರಂತೆ ನಿಖಿಲ್ ಸಿದ್ಧಾರ್ಥ್ (Nikhil Siddharth) ಸಿಟಿಆರ್ ಹೋಟೆಲ್ ನಲ್ಲಿ ದೋಸೆಯನ್ನು ಚಪ್ಪರಿಸಿ ತಿಂದಿದ್ದಾರೆ. ಇದೇ ವೇಳೆ ಅಭಿಮಾನಿಗಳು ನಿಖಿಲ್ ಜೊತೆ ಫೋಟೋಗೆ ಮುಗಿಬಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಕಾಫಿ ಕುಡಿದರು.

ಸ್ಪೈ (Spy) ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅವರು, ತಮ್ಮ ಸಿನಿಮಾದ ಪ್ರಚಾರದ ನಡುವೆಯೂ ದೋಸೆ ತಿಂದು ಸಂಭ‍್ರಮಿಸಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಸಿದ್ಧಾರ್ಥ್, ಕಾರ್ತಿಕೇಯ ಸಿನಿಮಾಗೆ ಕರ್ನಾಟಕದಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಕನ್ನಡ ಪ್ರೇಕ್ಷಕರಿಗೆ ನನ್ನ ಧನ್ಯವಾದ. ಅದೇ ರೀತಿ ಜೂನ್ 29ಕ್ಕೆ ಬರ್ತಿರುವ ಸ್ಪೈ ಚಿತ್ರಕ್ಕೆ ನಿಮ್ಮ ಬೆಂಬಲ ಇರಲಿ. ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಸಿನಿಮಾ ಮಾಡಿರೋದು ನನಗೆ ಹೆಮ್ಮೆ ಇದೆ. ಅವರ ಸಾವಿನ ಬಗ್ಗೆ ಈ ಚಿತ್ರದ ಮೂಲಕ ಒಂದು ಕ್ಲಾರಿಟಿ ಸಿಗಲಿದೆ. ಆಕ್ಷನ್, ಎಂಟರ್‌ಟೈನರ್ ಎಲ್ಲವೂ ಚಿತ್ರದಲ್ಲಿದೆ. ಪ್ರತಿಯೊಬ್ಬ ಭಾರತೀಯ ಈ ಸಿನಿಮಾ ನೋಡಲೇಬೇಕು. ಇದನ್ನೂ ಓದಿ:Exclusive: ಅರ್ಜುನ್ ಸರ್ಜಾ ನಿರ್ದೇಶನದ ಚಿತ್ರದಲ್ಲಿ ಉಪ್ಪಿ ಅಣ್ಣನ ಮಗ ನಟಿಸುತ್ತಾರಾ? ನಿರಂಜನ್ ಸ್ಪಷ್ಟನೆ

ನಟಿ ಐಶ್ವರ್ಯ ಮೆನನ್ (Aishwarya Menon) ಮಾತನಾಡಿ, ಇದೇ 29ಕ್ಕೆ ಸ್ಪೈ ಸಿನಿಮಾ ರಿಲೀಸ್ ಆಗ್ತಿದೆ. ಪ್ರತಿಯೊಬ್ಬರೂ ಚಿತ್ರಕ್ಕೆ ಬೆಂಬಲ ನೀಡಿ. ನಾನು ವೈಷ್ಣವಿ ಎಂಬ ಪಾತ್ರದಲ್ಲಿ ನಟಿಸಿದ್ದು, ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದೇನೆ. ದಾಸವಾಳ ಹಾಗೂ ನಮೋ ಭೂತಾತ್ಮ ಕನ್ನಡ ಸಿನಿಮಾಗಳಲ್ಲಿ ನನ್ನ ಜರ್ನಿ ಶುರುವಾಗಿದೆ. ಕನ್ನಡ ಇಂಡಸ್ಟ್ರೀ ನನಗೆ ಬಹಳ ವಿಶೇಷ. ಸ್ಪೈ ಕನ್ನಡದಲ್ಲಿಯೂ ಬಿಡುಗಡೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದರು.

ಸುಭಾಷ್ ಚಂದ್ರ ಬೋಸ್ (Subhash Chandra Bose) ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಸ್ಪೈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ. ಸನ್ಯಾ ಠಾಕೂರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್‌ ರೋಲ್‌ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್‌ ಗೋಮತಮ್, ಮಕರಂದ್‌ ದೇಶಪಾಂಡೆ, ನಿತಿನ್‌ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್‌, ಸೋನಿಯಾ ನರೇಶ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ನಿಖಿಲ್ ಸಿದ್ಧಾರ್ಥ್  ಪ್ಯಾನ್ ಇಂಡಿಯಾ ಸ್ಪೈ 29ಕ್ಕೆ ಬಿಡುಗಡೆಯಾಗಲಿದೆ.

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ