ಅಕ್ರಮ ಆಸ್ತಿ – ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅರೆಸ್ಟ್

By
1 Min Read

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್. ಪುರಂನ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತಹಶೀಲ್ದಾರ್ ಮನೆ, ಕಚೇರಿ ದಾಳಿ ನಡೆಸಿ ಎರಡು ದಿನಗಳ ಕಾಲ ನಿರಂತರ ಪರಿಶೀಲನೆ ಬಳಿಕ ಅರೆಸ್ಟ್ ಮಾಡಿದ್ದಾರೆ.

ಲೋಕಾಯುಕ್ತ ಪೊಲೀಸರ ತನಿಖೆಗೆ ಸರಿಯಾಗಿ ಸ್ಪಂದಿಸಿಲ್ಲ. ಮನೆಯಲ್ಲಿ ಸಿಕ್ಕ ದಾಖಲೆಗಳಿಗೆ ಸಂಬಂಧಿಸಿದಂತೆ ಸರಿಯಾದ ಉತ್ತರ ನೀಡಿಲ್ಲ. ಕಳೆದ 30 ಗಂಟೆಗಳಿಂದ ಮನೆಯಲ್ಲಿ ನಿರಂತರ ಶೋಧ ನಡೆಸಲಾಗಿತ್ತು. ಹೀಗಾಗಿ ತಹಶೀಲ್ದಾರ್ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಹಶೀಲ್ದಾರ್ ಮನೆ ಮೇಲೆ ಮುಂದುವರೆದ ʼಲೋಕಾʼ ದಾಳಿ – ಬಗೆದಷ್ಟು ಸಿಗುತ್ತಿದೆ ಕೋಟಿಗಟ್ಟಲೇ ಆಸ್ತಿ

ಅಜಿತ್ ರೈ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. 4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್‌ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ) ಹೊಂದಿದ್ದಾರೆ. ಎಲ್ಲದಕ್ಕೂ ಒಂದೇ ನಂಬರ್ ರಿಜಿಸ್ಟರ್ ಇದೆ. ಇದ್ಯಾವುದಕ್ಕೂ ಲೆಕ್ಕ ಕೊಡ್ತಾ ಇಲ್ಲ. ಸರಿ ಸುಮಾರು 150 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ.

ತಹಶೀಲ್ದಾರ್‌ನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನಾಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಮತ್ತೆ ವಶಕ್ಕೆ ಪಡೆಯಲು ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್