ವಿಚಾರಣೆಗೆ ಬರುವಂತೆ ‘ಆದಿ ಪುರುಷ’ ತಂಡಕ್ಕೆ ಹೈಕೋರ್ಟ್ ಸೂಚನೆ

Public TV
2 Min Read

ದಿ ಪುರುಷ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಕುಲದೀಪ್ ತಿವಾರಿ ಹಾಗೂ ನವೀನ್ ಧವನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ನಡೆಸಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾನ್ ಮತ್ತು ಪ್ರಕಾಶ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ  ಜುಲೈ 27ಕ್ಕೆ ಸಿನಿಮಾದ ನಿರ್ದೇಶಕ ಓಂ ರಾವುತ್, ನಿರ್ಮಾಪಕ ಭೂಷಣ್ ಕುಮಾರ್ ಹಾಗೂ ಬರಹಗಾರ ಮನೋಜ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಅಲ್ಲದೇ, ಈ ಸಿನಿಮಾವು ಸಾರ್ವಜನಿಕರ ಭಾವನೆಗೆ ಧಕ್ಕೆ ತರುವಂತಿದೆಯೇ ಎಂದು ಪರಿಶೀಲಿಸಿದ ಐವರು ಸದಸ್ಯರಿರುವ ಸಮಿತಿಯನ್ನು ನೇಮಿಸಬೇಕು ಎಂದು ಸರಕಾರಕ್ಕೂ ಹೈಕೋರ್ಟ್ ಸೂಚನೆ ನೀಡಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ನೀಡಿರುವ ಪ್ರಮಾಣಪತ್ರವನ್ನು ಮರುಪರಿಶೀಲಿಸಲು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

ಆದಿಪುರುಷ ಸಿನಿಮಾ ರಿಲೀಸ್ ಆಗಿ ವಾರದ ನಂತರ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದ್ದರೂ, ಅದರ ಕುರಿತಾಗಿ ನಡೆಯುತ್ತಿರುವ ಚರ್ಚೆ ಮಾತ್ರ ನಿಂತಿಲ್ಲ. ಹಲವು ಕಡೆ ಸಿನಿಮಾದ ಬಗ್ಗೆ ದೂರು ನೀಡಲಾಗಿದೆ. ದೇಶದ ಹೈಕೋರ್ಟ್ ಗಳು ಚಿತ್ರದ ಚಿಂತನೆಯನ್ನು ಗಂಭೀರವಾಗಿ ತಗೆದುಕೊಂಡಿವೆ. ಹೀಗಾಗಿ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗುತ್ತಲೇ ಇದೆ.

ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ಇದೀಗ ಅಲಹಾಬಾದ್ (Allahabad) ಹೈಕೋರ್ಟ್ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಇದನ್ನೂ ಓದಿ:ಗೋಲ್ಡನ್ ಟೆಂಪಲ್‌ನಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ ರಾಘವ್- ಪರಿಣಿತಿ ಜೋಡಿ

ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿದೆ. ‘ಭಾರತೀಯರು ಸಂಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿದೆ.

ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದೆ.

 

ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್