ತಂದೆಯ ಲೈಂಗಿಕ ಕಿರುಕುಳದಿಂದ ರಕ್ಷಿಸುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ರೇಪ್

Public TV
2 Min Read

ಜೈಪುರ: ತಂದೆ ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ (Sexual Harassment) ರಕ್ಷಿಸುವುದಾಗಿ ನಂಬಿಸಿ ಇಬ್ಬರು ವ್ಯಕ್ತಿಗಳು ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ (Gang Rape) ಘಟನೆ ರಾಜಸ್ಥಾನದ (Rajasthan) ಕೋಟಾದಲ್ಲಿ (Kota) ನಡೆದಿದೆ.

ತಂದೆ ತನ್ನ 13 ವರ್ಷ ವಯಸ್ಸಿನ ಮಗಳಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ರಕ್ಷಿಸುವುದಾಗಿ ಹೇಳಿದ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯನ್ನು ತನ್ನ ಜೊತೆಯಲ್ಲಿ ಕರೆದೊಯ್ದಿದ್ದಲ್ಲದೇ ತನ್ನ ಸ್ನೇಹಿತನ ಜೊತೆಗೂಡಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಜೂನ್ 26ರಂದು ಆರೋಪಿ ತಂದೆ ತನ್ನ 13 ವರ್ಷದ ಮಗಳು ಜೂನ್ 22ರಿಂದ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ದುಷ್ಟರಿಂದ ರಕ್ಷಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ 17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ!

ಘಟನೆಯ ಕುರಿತು ಬಾಲಕಿಯನ್ನು ವಿಚಾರಿಸಿದಾಗ ಆಕೆ, ತನ್ನ ತಾಯಿ ತೀರಿಕೊಂಡು 5 ವರ್ಷಗಳಾಗಿವೆ. ತಾಯಿಯ ನಿಧನದ ಬಳಿಕ ತಾನು ತಂದೆಯೊಂದಿಗೆ ವಾಸಮಾಡುತ್ತಿದ್ದು, ಸುಮಾರು ಒಂದೂವರೆ ವರ್ಷದಿಂದ ತಂದೆ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಈ ಕುರಿತು ಯಾರ ಬಳಿಯಾದರೂ ಮಾತನಾಡಿದರೆ ಕೊಲೆ ಮಾಡುವುದಾಗಿ ಜೀವಬೆದರಿಕೆ ಹಾಕಿದ್ದರು ಎಂದು ನಿಜಾಂಶ ಹೇಳಿದ್ದಾಳೆ. ಇದನ್ನೂ ಓದಿ: ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಇಷ್ಟು ಮಾತ್ರವಲ್ಲದೇ 29 ವರ್ಷದ ವ್ಯಕ್ತಿಯೋರ್ವ ಬಾಲಕಿಗೆ ಪರಿಚಯವಾಗಿದ್ದು, ಜೂನ್ 22ರಂದು ತಂದೆಯಿಂದ ರಕ್ಷಿಸುವುದಾಗಿ ಹೇಳಿ ಅಪ್ರಾಪ್ತೆಯನ್ನು ಆತನ ಜೊತೆಯಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ತನ್ನ ಸ್ನೇಹಿತನ ಜೊತೆ ಸೇರಿಕೊಂಡು ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅತ್ಯಾಚಾರವೆಸಗಿರುವುದು ಸಾಬೀತಾದ ಬಳಿಕ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Maharashtra Accident: ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಸಾವು

ಬಾಲಕಿಯ ಮಾಹಿತಿಯ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ತೆಗೆದುಕೊಂಡ ಪೊಲೀಸರು ಆರೋಪಿ ತಂದೆಯ ವಿರುದ್ಧ ಐಪಿಸಿ ಮತ್ತು ಪೋಕ್ಸೋ (POCSO) ಕಾಯ್ದೆಯ ಅಡಿಯಲ್ಲಿ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೇ ಇನ್ನಿಬ್ಬರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಪ್ರತ್ಯೇಕ ಪ್ರಕರಣವನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ಳು – ಪತ್ನಿ ಸೇರಿ ಐವರು ಅರೆಸ್ಟ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್