ತಹಶೀಲ್ದಾರ್ ಅನುಮಾನಾಸ್ಪದ ಸಾವಿಗೆ ಹೊಸ ಟ್ವಿಸ್ಟ್- ಡೆತ್ ನೋಟ್ ಪತ್ತೆ

By
1 Min Read

ಬೆಳಗಾವಿ: ನಗರದಲ್ಲಿ ತಹಶೀಲ್ದಾರ್ (Tahsildar) ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ತಮ್ಮ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ (Death Note) ಪತ್ತೆಯಾಗಿದೆ.

ಬೆಳಗಾವಿ (Belagavi) ನಗರದ ಎಸಿ ಕಚೇರಿಯ ಲಾಕರ್ ಪರಿಶೀಲನೆ ವೇಳೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಜೂನ್ 20ರಂದು ಬರೆದಿಟ್ಟಿದ್ದ ಪತ್ರ ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಸಾವಿಗೆ ಪತ್ನಿಯ ಕಿರುಕುಳವೇ (Harassment) ಕಾರಣ ಎಂದು ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ತಹಶೀಲ್ದಾರ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆಯಲು ಸಿದ್ಧಪಡಿಸಿದ್ದ ಪತ್ರ ಕೂಡ ಪರಿಶೀಲನೆ ವೇಳೆ ಪತ್ತೆಯಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ತಹಶೀಲ್ದಾರ್‌ ಅನುಮಾನಾಸ್ಪದ ಸಾವು – ಪತ್ನಿ, ಆಕೆ ಸಹೋದರನ ವಿರುದ್ಧ ಕೊಲೆ ಆರೋಪ

ಮನೆಯವರ ವಿರೋಧದ ನಡುವೆ ಪ್ರೀತಿಸಿ ಅಶೋಕ್ ಮದುವೆಯಾಗಿದ್ದರು. ಬೆಳಗಾವಿ ಉಪವಿಭಾಗ ಕಚೇರಿಯಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಸದ್ಯ ಜೂನ್ 29ರಂದು ಮನೆಯಲ್ಲಿ ಹೃದಯಾಘಾತದಿಂದ ಸಾವು ಎಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ನನ್ನ ಬಳಿ ದಾಖಲೆ ಇದೆ- ಹೆಚ್‍ಡಿಕೆ ಪೆನ್‍ಡ್ರೈವ್ ಬಾಂಬ್

ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪತ್ನಿ ಭೂಮಿ ಹಾಗೂ ಪತ್ನಿಯ ಸಹೋದರ ಸ್ಯಾಮುವಲ್ ವಿರುದ್ಧ ಕೇಸ್ ದಾಖಲಾಗಿದೆ. ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದು, ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಕೋವಿಡ್ ಹಗರಣಗಳ ಬಗ್ಗೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ವರದಿ ಸಲ್ಲಿಕೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್