ಚಲುವರಾಯಸ್ವಾಮಿ ನೆರಳಲ್ಲಿ ವರ್ಗಾವಣೆ ಆರೋಪ- KSRTC ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Public TV
1 Min Read

ಮಂಡ್ಯ: ಜಿಲ್ಲೆಯ ಕೆಎಸ್‍ಆರ್ ಟಿಸಿ ನಾಗಮಂಗಲ ಡಿಪೋದ (Nagamangala Bus Depot) ಚಾಲಕ, ಸಚಿವ ಚಲುವರಾಯಸ್ವಾಮಿ (Chaluvarayaswamy) ಸೂಚನೆಯಂತೆ ವರ್ಗಾವಣೆ ಮಾಡಿದ್ದಾರೆಂದು ಆರೋಪಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ತೀವ್ರ ಅಸ್ವಸ್ಥಗೊಂಡಿರುವ ಜಗದೀಶ್‍ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿಟ್ಟಿದ್ದ ಡೆತ್‍ನೋಟ್ ಬೆಳಕಿಗೆ ಬಂದಿದೆ. ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಚಾಲಕ ಕಮ್ ನಿರ್ವಾಹಕ ಜಗದೀಶ್ ಡೆತ್‍ನೋಟ್ ಬರೆದಿದ್ರು. ಇದನ್ನೂ ಓದಿ: ಕಾಲುವೆಗೆ ಬಿಟ್ಟಿರುವ ಕುಡಿಯುವ ನೀರಿಗೂ ಕನ್ನ – ಅಧಿಕಾರಿಗಳ ನಿರ್ಲಕ್ಷ್ಯ

ಡೆತ್‍ನೋಟ್‍ನಲ್ಲೇನಿದೆ..?: ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್ ಕೇಳಿದೆ. ನಿಯಂತ್ರಣಾಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನ ಕೇಳಿದಾಗ ಕೃಷಿ ಸಚಿವರ ಆದೇಶದ ಮೇರೆಗೆ ವರ್ಗಾವಣೆ (Bus Driver Jagadeesh Transfer) ಎಂದರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪವೆಂದು ತಿಳಿಯದೆ ನೊಂದಿದ್ದೇನೆ. ಈ ಒತ್ತಡ, ಅವಮಾನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡುವಂತೆ ಜಗದೀಶ್ ಪತ್ರ ಬರೆದಿದ್ದಾರೆ.

ನನ್ನ ಆತ್ಮಹತ್ಯೆಗೆ ಶಾಸಕರೇ ಕಾರಣ ಎಂದು ಡೆತ್‍ನೋಟ್‍ನಲ್ಲಿ ಆರೋಪಿಸಿದ್ದಾರೆ. ಸದ್ಯ ತೀವ್ರ ಅಸ್ವಸ್ಥಗೊಂಡಿರುವ ಜಗದೀಶ್‍ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇತ್ತ ಈ ಸಂಬಂಧ ಕರ್ತವ್ಯಕ್ಕೆ ಹಾಜರಾಗದೆ ಸಾರಿಗೆ ಸಿಬ್ಬಂದಿ ಆಕ್ರೋಶ ಹೊರಹಾಕುತ್ತಿದ್ದಾರೆ. ನಾಗಮಂಗಲದ ಡಿಪೋದಿಂದ ಯಾವುದೇ ಕೆಎಸ್‍ಆರ್‍ಟಿಸಿ ಬಸ್‍ಗಳು ಇನ್ನೂ ಹೊರಟಿಲ್ಲ. ಹೀಗಾಗಿ 60ಕ್ಕೂ ಹೆಚ್ಚು ಬಸ್‍ಗಳು ನಿಂತಲ್ಲೇ ನಿಂತಿವೆ. ಬಸ್ ಸಂಚಾರ ಸ್ಥಗಿತ ಹಿನ್ನೆಲೆಯ್ಲಲಿ ನಿಲ್ದಾಣ ಪ್ರಯಾಣಿಕರಿಲ್ಲದೆ ಖಾಲಿ ಖಾಲಿ ಎನಿಸುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್