Karnataka Budget 2023- ನೀರಾವರಿಗೆ ಯೋಜನೆಗೆ ಸಿಕ್ಕಿದ್ದು ಏನು?

By
1 Min Read

ಬೆಂಗಳೂರು: ಬಹುನಿರೀಕ್ಷಿತ ಬಜೆಟ್ (Karnataka Budget 2023) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದು, ಈ ಬಾರಿಯ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಒಟ್ಟು ನೀರಾವರಿ ಯೋಜನೆಗಳಿಗೆ 19 ಸಾವಿರ ಕೋಟಿ ರೂ. ಅನುದಾನವನ್ನು ಸಿದ್ದರಾಮಯ್ಯ (Siddaramaiah) ನೀಡಿದ್ದಾರೆ.

ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.  770 ಕೋಟಿ ರೂ. ವೆಚ್ಚದಲ್ಲಿ 899  ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಎತ್ತಿನಹೊಳೆ ಯೋಜನೆ (Yettina Hole Project) ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕಮ ಕೈಗೊಳ್ಳಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಬಿಡುಗಡೆಗೆ ಹಾಗೂ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಅಗತ್ಯ ತೀರುವಳಿ ಪಡೆಯಲು ಕ್ರಮವಹಿಸಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಭೂಸ್ವಾಧೀನ ಹಾಗೂ ಪುನರ್ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಇದನ್ನೂ ಓದಿ: Karnataka Budget 2023 – NEP ರದ್ದು, ಬರಲಿದೆ ರಾಜ್ಯದ್ದೇ ಹೊಸ ಶಿಕ್ಷಣ ನೀತಿ

ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳ ಎರಡನೇ ಹಂತದಲ್ಲಿ 529 ಕೋಟಿ ರೂ. ವೆಚ್ಚದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 296 ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸಿಎಂ ಹೇಳಿದರು.

ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ., ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಅನುದಾನ ನೀಡಲಾಗುವುದು. ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್‍ನಲ್ಲಿ ತಿಳಿಸಿದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್