ಮತ್ತೊಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಬೆಲ್ಟ್‌ನಿಂದ ಹೊಡೆದ ದುಷ್ಕರ್ಮಿ

By
1 Min Read

ಪಟ್ನಾ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಪಕ್ಕದ ಹಳಿಯಲ್ಲಿ ಚಲಿಸುವ ಮತ್ತೊಂದು ರೈಲಿನ ಪ್ರಯಾಣಿಕರಿಗೆ ಬೆಲ್ಟ್‌ನಿಂದ ಹೊಡೆದಿರುವ ಘಟನೆ ಬಿಹಾರದಲ್ಲಿ (Bihar) ನಡೆದಿದೆ. ಹೊಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ (Social Media ) ವೈರಲ್ ಆಗಿದೆ.

ಟ್ವಿಟ್ಟರ್‌ನಲ್ಲಿ ವೈರಲ್ ಆಗಿರುವ 29 ಸೆಕೆಂಡುಗಳ ವೀಡಿಯೊದಲ್ಲಿ, ವ್ಯಕ್ತಿ ಕೈಯಲ್ಲಿ ಬೆಲ್ಟ್ ಹಿಡಿದು ಪಕ್ಕದಲ್ಲಿ ಚಲಿಸುತ್ತಿದ್ದ ಮತ್ತೊಂದು ರೈಲಿನ ಪ್ರಯಾಣಿಕರನ್ನು ಹೊಡೆಯುತ್ತಿದ್ದಾನೆ. ಅಲ್ಲದೇ ಹೊಡೆಯುವಾಗ ನಗುತ್ತಿದ್ದಾನೆ. ಈ ಕೃತ್ಯದಲ್ಲಿ ಎರಡರಿಂದ ಮೂರು ಕಿಡಿಗೇಡಿಗಳು ಇರುವಂತಿದೆ. ಮತ್ತೊಬ್ಬ ವೀಡಿಯೋ ಮಾಡುತ್ತಿದ್ದಾನೆ. ದುಷ್ಕರ್ಮಿಗಳ ವಿರುದ್ಧ ರೈಲ್ವೇ ಇಲಾಖೆ (Railways) ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

ಈ ಬಗ್ಗೆ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಸಮಾಜ ವಿರೋಧಿ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಒಬ್ಬರು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಟ್ವೀಟ್‍ನ್ನು ಗಯಾ ಪೊಲೀಸರು ಹಾಗೂ ರೈಲ್ವೇ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

ಆತ ಮನೋರೋಗಿಯಂತೆ ಕಾಣುತ್ತಾನೆ. ಆತನಿಗೆ ಶಿಕ್ಷೆ ಮತ್ತು ಚಿಕಿತ್ಸೆಯ ಅಗತ್ಯವಿದೆ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಭಾರತೀಯ ರೈಲ್ವೇ ಟ್ವೀಟ್‍ಗೆ ಪ್ರತಿಕ್ರಿಯಿಸಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಇದನ್ನೂ ಓದಿ: ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿದ್ದರಾಮಯ್ಯ ಘೋಷಣೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್