ಜೈನಮುನಿ ಹತ್ಯೆ: ಅಘಾತ ವ್ಯಕ್ತಪಡಿಸಿದ ಸಿಎಂ – ಸಮಗ್ರ ತನಿಖೆಗೆ ಸೂಚನೆ

Public TV
1 Min Read

ಬೆಂಗಳೂರು: ಹಿರೇಕೋಡಿಯ ಜೈನಮುನಿ (Jain Muni) ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಜುಲೈ 6ರಿಂದ ನಂದಿ ಪರ್ವತ (Nandi Parvatha Ashram) ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು.

ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿ ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸುಧಾಕರ್ ಚಾಲೆಂಜ್ ಸ್ವೀಕರಿಸಿ ಪ್ರತಿ ಸವಾಲು ಎಸೆದ ಶಾಸಕ ಪ್ರದೀಪ್ ಈಶ್ವರ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್