ಲಕ್ನೋ: ಉತ್ತರ ಪ್ರದೇಶದಲ್ಲಿ (Uttarpradesh Rain) ಕಳೆದ ಮೂರು ದಿನಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 10 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, 34 ರಲ್ಲಿ 17 ಮಂದಿ ಸಿಡಿಲು ಬಡಿತದಿಂದ, 12 ಮಂದಿ ಮುಳುಗುವಿಕೆಯಿಂದ ಮತ್ತು ಐವರು ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿ, ಪ್ರಕೃತಿ ವಿಕೋಪಗಳಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ನಿಧನಕ್ಕೂ ಮುನ್ನ 33 ವರ್ಷದ ಗೆಳತಿಯ ಹೆಸರಲ್ಲಿ 900 ಕೋಟಿ ಆಸ್ತಿ ಬರೆದಿಟ್ಟ ಇಟಲಿ ಮಾಜಿ ಪ್ರಧಾನಿ
ಉತ್ತರ ಪ್ರದೇಶದಲ್ಲಿ ಈಗಾಗಲೇ 11 ಪ್ರತಿಶತ ಅಧಿಕ ಮಳೆಯಾಗಿದೆ. ಇದು ನದಿಯ ನೀರಿನ ಮಟ್ಟದಲ್ಲಿ ಏರಿಕೆಗೆ ಕಾರಣವಾಗಿದೆ. ತಗ್ಗು ಪ್ರದೇಶಗಳನ್ನು ಜಲಾವೃತಗೊಂಡಿದೆ. ಹವಾಮಾನ ಇಲಾಖೆ ಅಂಕಿ ಅಂಶಗಳ ಪ್ರಕಾರ ರಾಜ್ಯದ 75 ಜಿಲ್ಲೆಗಳ ಪೈಕಿ ಸುಮಾರು 68 ಜಿಲ್ಲೆಗಳಲ್ಲಿ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಗಂಗಾ, ರಾಮಗಂಗಾ, ಯಮುನಾ, ರಾಪ್ತಿ ಸೇರಿದಂತೆ ರಾಜ್ಯಾದ್ಯಂತ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
Web Stories