ಸ್ಪೆಷಲ್ ಟೊಮೆಟೋ ಫೋರ್ಸ್ ರಚಿಸಿ: ಅಖಿಲೇಶ್ ಯಾದವ್

Public TV
2 Min Read

ನವದೆಹಲಿ: ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡಾಗ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬೀಳುತ್ತಿದ್ದ ಕೆಂಪು ಸುಂದರಿ ಟೊಮೆಟೋಗೆ ಇದೀಗ ಭರ್ಜರಿ ಬೇಡಿಕೆ ಇದೆ. ದೇಶಾದ್ಯಂತ ಟೊಮೆಟೋ (Tomato) ಬೆಲೆ ಗಗನಕ್ಕೇರಿದ್ದು, ಇದೀಗ ಗನ್ ಮ್ಯಾನ್‍ಗಳನ್ನಿಟ್ಟುಕೊಂಡು ಮಾರಾಟ ಮಡುವ ಪರಿಸ್ಥಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಎಸ್‍ಟಿಎಫ್ ಗೆ ಹೊಸ ನಾಮಕರಣವೊಂದನ್ನು ಮಾಡುವಂತೆ ಸಲಹೆ ನೀಡಿದ್ದಾರೆ.

ಹೌದು. ಟೊಮೆಟೋ ಬಂಗಾರ ಬೆಲೆ ಪಡೆಯುತ್ತಿದ್ದಂತೆಯೇ ಕಳ್ಳತನದ ಸುದ್ದಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಸ್ಪೆಷಲ್ ಟಾಸ್ಕ್ ಫೋರ್ಸ್ (STF) ಅನ್ನು ಸ್ಪೆಷನ್ ಟೊಮೆಟೋ ಫೋರ್ಸ್ ಎಂದು ಕರೆಯುವಂತೆ ಸಲಹೆ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸರನ್ನು ಅಖಿಲೇಶ್ (Akhilesh Yadav) ಕಿಚಾಯಿಸಿದ್ದಾರೆ.

ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಮಾರ್ಕೆಟ್‍ನಲ್ಲಿರುವ ಅಂಗಡಿಯೊಂದರಿಂದ 26 ಕೆ.ಜಿ ಟೊಮೆಟೋ, 25 ಕೆ.ಜಿ ಹಸಿ ಮೆಣಸಿನ ಕಾಯಿ ಹಾಗೂ 8 ಕೆ.ಜಿ ಶುಂಠಿ ಗುರುವಾರ ಕಳ್ಳತನವಾಗಿತ್ತು. ಈ ಸಂಬಂಧ ಇಬ್ಬರನ್ನು ಬಂಧನ ಕೂಡ ಮಾಡಲಾಗಿತ್ತು. ಇದನ್ನೂ ಓದಿ: ಇನ್ನು ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ ಮಾಡಬಹುದು

ಜುಲೈ 10 ಸೋಮವಾರದಂದು ಅಂಗಡಿ ಮಾಲೀಕರಾದ ರಾಮ್‍ಜಿ ಹಾಗೂ ನೈಮ್ ಖಾನ್ ಎಂದಿನಂತೆ ವ್ಯಾಪಾರ ಮುಗಿಸಿ ರಾತ್ರಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದರು. ಬಳಿಕ ಮರುದಿನ ಬೆಳಗ್ಗೆ ಬಂದು ಅಂಗಡಿ ಓಪನ್ ಮಾಡಿದಾಗ ಟೊಮೆಟೋ, ಹಸಿಮೆಣಸಿನ ಕಾಯಿ ಹಾಗೂ ಶುಂಠಿ ಕಳ್ಳತನವಾಗಿರುವುದು ಬಯಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಕಳ್ಳತನ ಗೊತ್ತಾದ ತಕ್ಷಣವೇ ಇಬ್ಬರೂ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಗಣಿಸಿ ಕಾಂತ ಪ್ರಸಾದ್ ಹಾಗೂ ಮೊಹಮ್ಮದ್ ಇಸ್ಲಾಮ್ ಅನ್ನು ಬಂಧಿಸಿ, ಐಪಿಸಿ ಸೆಕ್ಷನ್ 379ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅಖಿಲೆಶ್ ಯಾದವ್, ‘ಸ್ಪೆಷಲ್ ಟಾಸ್ಕ್ ಫೋರ್ಸ್’ ಅನ್ನು ‘ಸ್ಪೆಷಲ್ ಟೊಮೆಟೋ ಫೋರ್ಸ್’ ಎಂದು ಬದಲಾಯಿಸುವಂತೆ ಸಲಹೆ ನೀಡಿ ಕಿಚಾಯಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್