ಮಲಗಿದ್ದಲ್ಲಿಯೇ ಇಬ್ಬರು ಯುವಕರ ಅನುಮಾನಾಸ್ಪದ ಸಾವು

Public TV
2 Min Read

ಹಾಸನ: ಕೆಲಸ ಅರಸಿಕೊಂಡು ಹಾಸನ (Hassan) ನಗರಕ್ಕೆ ಬಂದಿದ್ದ ಉತ್ತರ ಪ್ರದೇಶ (Uttar Pradesh) ಮೂಲದ ಇಬ್ಬರು ಯುವಕರು ಮಲಗಿದ್ದಲ್ಲಿಯೇ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ತಾಲೂಕಿನ ಹನುಮಂತಪುರದಲ್ಲಿ (Hanumanthapura) ನಡೆದಿದೆ.

ಉತ್ತರಪ್ರದೇಶದ ನಯನ್‌ಪುರ ಗ್ರಾಮದ ರಾಮ್ ಸಂಜೀವನ್ (30) ಹಾಗೂ ನವಾಬ್ (24) ಮೃತ ದುರ್ದೈವಿಗಳು. ಇವರಿಬ್ಬರು ಕಳೆದ ಹದಿನೈದು ದಿನದ ಹಿಂದೆ ಕೆಲಸ ಕೊಡಿಸುವಂತೆ ಹಾಸನದಲ್ಲಿರುವ ತನ್ನ ಸ್ನೇಹಿತನಾದ ವಿಕ್ರಂ ಎಂಬಾತನನ್ನು ಸಂಪರ್ಕಿಸಿದ್ದರು. ಈ ವೇಳೆ ವಿಕ್ರಂ ಇಬ್ಬರಿಗೂ ಕೆಲಸ ಕೊಡಿಸುವುದಾಗಿ ಹಾಸನಕ್ಕೆ ಕರೆಸಿಕೊಂಡಿದ್ದ. ವಾರದ ಹಿಂದೆ ಹಾಸನಕ್ಕೆ ಬಂದಿದ್ದ ರಾಮ್ ಸಂಜೀವನ್ ಹಾಗೂ ನವಾಬ್ ಹನುಮಂತಪುರದಲ್ಲಿ ಬಾಡಿಗೆ ರೂಂ ಪಡೆದು ನಗರದ ಹೊರವಲಯದ ಖಾಸಗಿ ಕಂಪನಿಯಲ್ಲಿ ಎರಡು ದಿನ ಕೆಲಸ ಮಾಡಿದ್ದರು. ಇದನ್ನೂ ಓದಿ: ಅಂಗಡಿಯಲ್ಲಿ ಯಾರೂ ಇಲ್ಲದ್ದನ್ನ ಗಮನಿಸಿ ಕ್ಯಾಶ್‌ ಕೌಂಟರ್‌ನಿಂದ ಹಣ ಎತ್ಕೊಂಡು ಎಸ್ಕೇಪ್‌ ಆದ ಕಳ್ಳ

ಬಳಿಕ ಇಬ್ಬರಿಗೂ ವಿಪರೀತ ಜ್ವರ ಹಾಗೂ ನೆಗಡಿ ಕಾಣಿಸಿಕೊಂಡಿತ್ತು. ಹೀಗಾಗಿ ಕೆಲಸಕ್ಕೆ ರಜೆ ಹಾಕಿ ಗುರುವಾರ ಇಬ್ಬರೂ ಖಾಸಗಿ ಕ್ಲಿನಿಕ್‌ಗೆ ತೆರಳಿ ಚಿಕಿತ್ಸೆ ಪಡೆದುಕೊಂಡು ಬಂದು ರಾತ್ರಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಇಡೀ ದಿನ ರೂಂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಮನೆ ಮಾಲೀಕರು ರೂಂ ಬಾಗಿಲು ಒಡೆದು ನೋಡಿದಾಗ ಮಲಗಿದ್ದಲ್ಲಿಯೇ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿವೆ. ಇದನ್ನೂ ಓದಿ: ಬಾಲನಟಿ ವಂಶಿಕಾ ಹೆಸರಿನಲ್ಲಿ ದೋಖಾ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಿಶಾ

ಇದರಿಂದ ಗಾಬರಿಗೊಂಡ ಮನೆ ಮಾಲೀಕ ಕೂಡಲೇ ಹಾಸನ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ (District Hospital) ಶವಾಗಾರಕ್ಕೆ ರವಾನಿಸಿದ್ದಾರೆ. ಯುವಕರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ- ನಾಲ್ಕು ವಾಹನಗಳು ಜಖಂ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್