ಬೆಂಗಳೂರಿನ ಫ್ಲೈಓವರ್‌ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

By
1 Min Read

ಬೆಂಗಳೂರು: ನಗರದ ಕೆ.ಆರ್. ಮಾರ್ಕೆಟ್ (K.R. Market) ಫ್ಲೈಓವರ್‌ನಲ್ಲೇ (Flyover) ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದೆ. ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ (Bengaluru Robbery) ಮಾಡಿ ಎಸ್ಕೇಪ್ ಆಗಿದ್ದಾರೆ.

3 ಕೆಜಿ 780 ಗ್ರಾಂ ತೂಕದ ಸುಮಾರು 1.70 ಕೋಟಿ ರೂ. ಮೌಲ್ಯದ ಚಿನ್ನವನ್ನು ದರೋಡೆಕೋರರು ದೋಚಿದ್ದಾರೆ. ಕೆಲವೇ ಸೆಕೆಂಡ್‌ಗಳಲ್ಲಿ ಈ ದರೋಡೆ ನಡೆದಿರುವುದು ಬೆಂಗಳೂರಿಗರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇದನ್ನೂ ಓದಿ: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ

ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್‌ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್‌ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್‌ ಮೇಲೆ ಚಲಿಸುತಿದ್ದ ಬೈಕ್‌ಗೆ ಅಡ್ಡ ಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ನಂತರ ನೇರವಾಗಿ ಸ್ಕೂಟರ್‌ನಲ್ಲಿ ಚಿನ್ನ ಇದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ದರೋಡೆಗೊಳಗಾದ ವ್ಯಾಪಾರಿ ಕಾಟನ್‌ಪೇಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಸಿಸಿಟಿವಿ ಇಲ್ಲ. ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಗಂಡು.. ಬೀದಿಯಲ್ಲಿ ಹೆಣ್ಣು; ಐಷಾರಾಮಿ ಜೀವನಕ್ಕೆ ಹೆಣ್ಣಾಗಿದ್ದ ಐನಾತಿ ಅರೆಸ್ಟ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್