ಉತ್ತರ ಪ್ರದೇಶದಲ್ಲಿ ದಲಿತ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ

Public TV
1 Min Read

ಲಕ್ನೋ: ವ್ಯಕ್ತಿಯೊಬ್ಬ ದಲಿತ (Dalit) ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಮತ್ತೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದ (Uttar Pradesh) ಸೋನಭದ್ರಾದಲ್ಲಿ ನಡೆದಿದೆ. ಈ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ವ್ಯಕ್ತಿಯೊಬ್ಬ ಮತ್ತೊಬ್ಬನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯ ವ್ಯಾಪಕವಾಗಿ ವೈರಲ್‌ ಆದ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ

ಜುಲೈ 11 ರಂದು ಈ ಘಟನೆ ನಡೆದಿದೆ. ಮದ್ಯ ಸೇವಿಸಿದ್ದ ಇಬ್ಬರು ಸ್ನೇಹಿತರು ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ದಲಿತ ವ್ಯಕ್ತಿ ಗುಲಾಬ್‌ ಕೋಲ್‌ ಎಂಬಾತನ ಕಿವಿಯ ಮೇಲೆ ಜವಾಹರ್‌ ಪಟೇಲ್‌ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವೀಡಿಯೋವನ್ನು ಯಾರೋ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ. ಸಂತ್ರಸ್ತ ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾನೆ. ಇದರಿಂದ ಎಚ್ಚೆತ್ತ ಪೊಲೀಸರು ಹಾಗೂ ಆಡಳಿತಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ – AAP ಆರೋಪ

ಕೆಲ ದಿನಗಳ ಹಿಂದೆಯಷ್ಟೇ ಮಧ್ಯಪ್ರದೇಶದಲ್ಲಿ ಇಂತಹದ್ದೇ ಅಮಾನವೀಯ ಘಟನೆ ನಡೆದಿತ್ತು. ಬುಡಕಟ್ಟು ಸಮುದಾಯಕ್ಕೆ ಸೇರಿದ ದಶ್ಮತ್ ರಾವತ್ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ. ಇದಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದರು. ಆಗ ಸ್ವತಃ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಸಂತ್ರಸ್ತನನ್ನು ತಮ್ಮ ಮನೆಗೆ ಕರೆಸಿಕೊಂಡು ಪಾದ ತೊಳೆದು ಗೌರವಿಸಿದರು. ಆ ಮೂಲಕ ವಿವಾದ ತಣ್ಣಗಾಗುವಂತೆ ಮಾಡಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್