ದುಷ್ಕರ್ಮಿಗಳ ಗುಂಡಿನ ದಾಳಿಗೆ ಉದ್ಯಮಿ ಸೇರಿ ಇಬ್ಬರು ಬಲಿ

Public TV
1 Min Read

ಪಟ್ನಾ: ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಿಂದಾಗಿ ಉದ್ಯಮಿ (Businessman) ಹಾಗೂ ಆತನ ಅಂಗರಕ್ಷಕ (Bodyguard) ಮೃತಪಟ್ಟ ಘಟನೆ ಬಿಹಾರದ (Bihar) ಮುಜಾಫರ್‌ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಮೃತ ಉದ್ಯಮಿಯನ್ನು ಅಶುತೋಷ್ ಶಾಹಿ ಎಂದು ಗುರುತಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಅವರ ಅಂಗರಕ್ಷಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅವರ ಮತ್ತಿಬ್ಬರು ಅಂಗರಕ್ಷಕರು ಮತ್ತು ವಕೀಲ ಸೈಯದ್ ಖಾಸಿಂ ಹಸನ್ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಕೂಡ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಇಬ್ಬರು ಹೆಣ್ಣುಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ!

ಇಬ್ಬರು ಆರೋಪಿಗಳು ಕೃತ್ಯದಲ್ಲಿ ಶಾಮೀಲಾಗಿರುವುದು ದೃಢಪಟ್ಟಿದೆ. ಆದರೆ ಗುಂಡಿನ ದಾಳಿಯಲ್ಲಿ ಒಟ್ಟು ನಾಲ್ವರು ಭಾಗಿಯಾಗಿದ್ದಾರೆ. ಬೈಕ್‍ನಲ್ಲಿ ಬಂದಿದ್ದ ನಾಲ್ವರು ಈ ಗುಂಡಿನ ದಾಳಿ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆಸ್ತಿಯ ವಿಚಾರವಾಗಿ ಈ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ. ಆದರೆ ಇದು ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಉದ್ಯಮಿ ಅಶುತೋಷ್ ಅವರಿಗೆ ಈ ಹಿಂದೆ ಶಂಭು-ಮಂಟು ಗ್ಯಾಂಗ್ ಕೊಲೆ ಬೆದರಿಕೆ ಹಾಕಿದ್ದರು. ಅವರು ಹಿಂದಿನ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದರು. ಆದರೆ ಅವರ ನಾಮಪತ್ರ ಅಸಿಂಧುಗೊಂಡಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.ಇದನ್ನೂ ಓದಿ: ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಕ್ಕೆ ಸಚಿವ ರಾಜೇಂದ್ರ ಗುಧಾ ವಜಾ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್