ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್‌ ಮೋದಿ – ಪ್ರಧಾನಿಗೆ ರಾಹುಲ್‌ ಗಾಂಧಿ ತಿರುಗೇಟು

Public TV
1 Min Read

ನವದೆಹಲಿ: ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ, ಇಂಡಿಯನ್ ಮುಜಾಹಿದೀನ್‌ನಲ್ಲೂ ಭಾರತ ಎನ್ನುವ ಪದವಿದೆ. ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗುವುದಿಲ್ಲ ಎಂದು ವಿಪಕ್ಷಗಳ I.N.D.I.A ಒಕ್ಕೂಟಕ್ಕೆ ಟಾಂಗ್‌ ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ತಿರುಗೇಟು ನೀಡಿದ್ದಾರೆ.

ಮಿಸ್ಟರ್‌ ಮೋದಿ ಅವರೇ, ನಿಮಗೆ ಹೇಗೆ ಬೇಕೋ ಹಾಗೆ ನಮ್ಮನ್ನು ಕರೆಯಿರಿ. ನಾವು INDIA. ಮಣಿಪುರ ಸಂಘರ್ಷ ಸರಿಪಡಿಸಲು ಮತ್ತು ಪ್ರತಿ ಮಹಿಳೆ, ಮಗುವಿನ ಕಣ್ಣೀರು ಒರೆಸಲು ಸಹಾಯ ಮಾಡುತ್ತೇವೆ. ಎಲ್ಲ ಜನರಿಗೆ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರುತ್ತೇವೆ. ನಾವು ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: PFI, ಇಂಡಿಯನ್ ಮುಜಾಹಿದೀನ್‌ನಲ್ಲೂ ಭಾರತ ಅನ್ನೋ ಪದವಿದೆ – ವಿಪಕ್ಷಗಳ INDIA ಒಕ್ಕೂಟಕ್ಕೆ ಮೋದಿ ಟಾಂಗ್‌

ಸಂಸತ್ತಿನ ಮುಂಗಾರು ಅಧಿವೇಶನ ಗುರುವಾರದಿಂದ ಆರಂಭಗೊಂಡಿದ್ದು, ಪ್ರತಿಪಕ್ಷಗಳು ಮಣಿಪುರದ ಬಗ್ಗೆ ವಿಸ್ತೃತ ಚರ್ಚೆಗೆ ಒತ್ತಾಯಿಸಿವೆ. ಮಣಿಪುರ ಸಂಘರ್ಷ ವಿಚಾರವಾಗಿ ಸದನದಲ್ಲಿ ಗದ್ದಲ ಉಂಟಾಗಿದೆ. ಈ ವಿಷಯದ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ಈ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸರ್ಕಾರದ ನಿಲುವನ್ನು ಮುಂದಿಡಲು ಸಿದ್ಧ ಎಂದು ಹೇಳಿದ್ದರು. ಆದರೆ ಪ್ರಧಾನಿಗಳು ಮಾತನಾಡಬೇಕು ಎಂದು ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದಿವೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಚಿಂತನೆ

ರಾಹುಲ್ ಗಾಂಧಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ‌ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಮುಂಗಾರು ಅಧಿವೇಶನಕ್ಕೆ ಹಾಜರಾಗುತ್ತಿಲ್ಲ. ಹೀಗಾಗಿ ಟ್ವೀಟ್‌ ಮೂಲಕ ಪ್ರಧಾನಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್