ಇನ್ಮುಂದೆ ರಷ್ಯಾದಲ್ಲಿ ಗಂಡು ಹೆಣ್ಣಾಗಿ.. ಹೆಣ್ಣು ಗಂಡಾಗಿ ಬದಲಾಗುವಂತಿಲ್ಲ

Public TV
1 Min Read

– ಲಿಂಗ ಪರಿವರ್ತನೆಗೆ ಶಸ್ತ್ರಚಿಕಿತ್ಸೆ ನಿಷೇಧಿಸುವ ಕಾನೂನಿಗೆ ಪುಟಿನ್‌ ಸಹಿ

ಮಾಸ್ಕೋ: ರಷ್ಯಾ (Russia) ದೇಶದಲ್ಲಿ ಲಿಂಗ ಪರಿವರ್ತನೆಗೆ ಶಸ್ತ್ರಚಿಕಿತ್ಸೆ (Gender Reassignment Surgery) ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಸಹಿ ಹಾಕಿದ್ದಾರೆ.

ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಹಾಗೆಯೇ ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ನೀಲಿ ಬಣ್ಣದ ಜೀನ್ಸ್‌ ಬ್ಯಾನ್‌, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು

ಕಾನೂನಿನ ಮುಖ್ಯ ಗುರಿಯು, ರಷ್ಯಾ ಸಮಾಜದ ಸಾಂವಿಧಾನಿಕ ನೈತಿಕ ತತ್ವಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು. ದೇಶದ ಜನರ ಆರೋಗ್ಯವನ್ನು, ಅದರಲ್ಲೂ ವಿಶೇಷವಾಗಿ ಮಕ್ಕಳ ಆರೋಗ್ಯವನ್ನು ಕಾಪಾಡುವುದಾಗಿದೆ ಎನ್ನಲಾಗಿದೆ.

ಈ ಕಾನೂನು ಅಂಗೀಕಾರವಾದ ದಿನದಿಂದಲೇ ಜಾರಿಗೆ ಬರುತ್ತದೆ. ಈಗಾಗಲೇ ಲಿಂಗ ಬದಲಾಯಿಸಿಕೊಂಡಿರುವವರಿಗೆ ಈ ಕಾನೂನು ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮೂರು ತಿಂಗಳು ಸೂರ್ಯ ಉದಯಿಸದ ಊರಿಗೆ, ಸೂರ್ಯನನ್ನು ತಂದ ಕಥೆ!

ರಷ್ಯಾದಲ್ಲಿ ಹೊಸ LGBTQ ವಿರೋಧಿ ಕಾನೂನುಗಳ ಭಾಗವಾಗಿ ಲಿಂಗ ಪರಿವರ್ತನೆಗೆ ಶಸ್ತ್ರಚಿಕಿತ್ಸೆ ಸೇರಿದಂತೆ ತೃತೀಯಲಿಂಗಿಗಳಿಗೆ ಎಲ್ಲಾ ವೈದ್ಯಕೀಯ ಸಹಾಯವನ್ನು ನಿಷೇಧಿಸುವ ಹೊಸ ಕಾನೂನನ್ನು ರಷ್ಯಾದ ಸ್ಟೇಟ್ ಡುಮಾ ಅಥವಾ ಸಂಸತ್ತಿನ ಕೆಳಮನೆಯು ಜು.14 ರಂದು ಅನುಮೋದಿಸಿತು.

ರಷ್ಯಾದಲ್ಲಿನ ಇತ್ತೀಚಿನ ಕಾನೂನು ಬೆಳವಣಿಗೆಗಳು LGBTQ ಸಮುದಾಯದ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುತ್ತಿವೆ. ದೇಶದ ನಿಯಮಗಳ ಬಿಗಿಗೊಳಿಸುವಿಕೆ ಮತ್ತು ತೃತೀಯಲಿಂಗಿಗಳ ಹಕ್ಕುಗಳ ಮೇಲೆ ನಿಯಂತ್ರಣ ಸಾಧಿಸಲಾಗುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್