ಹೆಚ್‌ಡಿಕೆಗೆ ನಾಯಕತ್ವ ನೀಡೋ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್‌ ಕುಮಾರ್‌

Public TV
1 Min Read

ಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ (BJP) ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ (Sunil Kumar) ಹೇಳಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಜೆಡಿಎಸ್‌ (JDS) ಜತೆ ಮೈತ್ರಿಯ ಅನಿವಾರ್ಯತೆ ಬಿಜೆಪಿಗಿಲ್ಲ, ಲೋಕಸಭೆಯಲ್ಲಿ ಕಳೆದ ಸಲದಷ್ಟೇ ಸೀಟು ಗೆಲ್ಲುತ್ತೇವೆ. ಹೆಚ್‌ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಇನ್ನೂ ಯಾರನ್ನು ಹೈಕಮಾಂಡ್‌ (BJP High Command) ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಇದನ್ನೂ ಓದಿ: ನಮ್ಮ ಮನೆಗೆ ಬೆಂಕಿ ಹಚ್ಚಿದವರನ್ನ ಪಕ್ಷದ ಅಧ್ಯಕ್ಷರು ಜೊತೆಯಲ್ಲಿಟ್ಟುಕೊಂಡು ಓಡಾಡ್ತಿದ್ದಾರೆ: ಅಖಂಡ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಕುಮಾರಸ್ವಾಮಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಅಷ್ಟೇ ಅಲ್ಲದೇ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು. ಹೀಗಾಗಿ ಎದ್ದಿದ್ದ ಹಲವು ಅನುಮಾನಗಳಿಗೆ ಈಗ ಸುನೀಲ್‌ ಕುಮಾರ್‌ ಉತ್ತರ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡ, ಲೋಕಸಭೆ ಚುನಾವಣೆಯಲ್ಲಿ (Lok Sabha Election) ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತೇವೆ.ಸದನದಲ್ಲಿ ಮಾತಾಡಿದ ಮಾತ್ರಕ್ಕೆ ಎರಡು ಪಕ್ಷಗಳು ಒಂದುಗೂಡಿದಂತಲ್ಲ.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್