‘ಬಾಹುಬಲಿ’ ಪ್ರಭಾಸ್ ಫೇಸ್‌ಬುಕ್ ಅಕೌಂಟ್ ಹ್ಯಾಕ್

By
1 Min Read

ಬಾಹುಬಲಿ ನಟ ಪ್ರಭಾಸ್ (Prabhas) ಅವರು ‘ಪ್ರಾಜೆಕ್ಟ್ ಕೆ’ (Project K) ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ನಾಗ್ ಅಶ್ವೀನ್, ದೀಪಿಕಾ ಪಡುಕೋಣೆ(Deepika Padukone) ಜೊತೆ ‘ಪ್ರಾಜೆಕ್ಟ್ ಕೆʼ ಸಿನಿಮಾದ ಶೂಟಿಂಗ್ ಪ್ರಭಾಸ್ ತೊಡಗಿಸಿಕೊಂಡಿದ್ದಾರೆ. ಇದೇ ವೇಳೆ ಪ್ರಭಾಸ್ ಅವರ ಅಧಿಕೃತ ಫೇಸ್‌ಬುಕ್ ಖಾತೆ ಹ್ಯಾಕ್ (Hack) ಆಗಿದೆ.

ಪ್ರಭಾಸ್ (Prabhas) ನಟನೆಯ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗುತ್ತಿದೆ. ಆದರೂ ಅವರಿಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ. ಪ್ರಶಾಂತ್ ನೀಲ್ ಜೊತೆಗಿನ ಸಲಾರ್ (Salaar) , ನಾಗ್ ಅಶ್ವೀನ್ ಜೊತೆ ಪ್ರಾಜೆಕ್ಟ್ ಕೆ, ಕಲ್ಕಿ 2898, ಸೇರಿದಂತೆ ಸಾಕಷ್ಟು ಸಿನಿಮಾಗಳ ಅವಕಾಶವಿದೆ. ಅವರ ಸಿನಿಮಾಗಾಗಿಯೇ ಕಾದು ಕೂರುವ ಅಪಾರ ಅಭಿಮಾನಿಗಳಿದ್ದಾರೆ.

ಈಗ ಪ್ರಾಜೆಕ್ಟ್ ಕೆ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಚಿತ್ರದ ಶೇ.೮೦ಕ್ಕೂ ಹೆಚ್ಚು ಚಿತ್ರೀಕರಣ ಈಗಾಗಲೇ ಮುಗಿದಿದೆ. ಈ ಚಿತ್ರದಲ್ಲಿ ಪ್ರಭಾಸ್‌ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸೂಪರ್ ಸ್ಟಾರ್‌ಗಳು ನಟಿಸಿರುವ ಸಿನಿಮಾದ ಮೇಲೆ ಫ್ಯಾನ್ಸ್‌ಗೆ ನಿರೀಕ್ಷೆಯಿದೆ. ಇದನ್ನೂ ಓದಿ:ತೆಲುಗಿನಲ್ಲಿ ಖುಷಿ ರವಿ ಮೇನಿಯಾ ಶುರು

ಇದೇ ವೇಳೆ ಪ್ರಭಾಸ್ ಅವರ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆಯಂತೆ. ಮೇಲಾಗಿ ಅವರ ಖಾತೆಯಿಂದ ಅನಿರೀಕ್ಷಿತ ಪೋಸ್ಟ್ ಬಂದಿದ್ದು, ಅಭಿಮಾನಿಗಳು ಗೊಂದಲಕ್ಕೀಡಾಗಿದ್ದಾರೆ. ತಮ್ಮ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಸ್ವತಃ ಪ್ರಭಾಸ್ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹೇಳಿದ್ದಾರೆ. ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ನಟ ತಿಳಿಸಿದ್ದಾರೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್