ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್ – ಸಹಾಯಕ್ಕೆ ಬಂದ ಇಬ್ಬರು ಸಾವು

Public TV
1 Min Read

ಮೈಸೂರು: ಕಾರೊಂದು ಅಪಘಾತಕ್ಕೀಡಾಗಿ (Car Accident) ಅದಕ್ಕೆ ವಿದ್ಯುತ್ ಪ್ರವಹಿಸಿದ (Electric Shock) ಕಾರಣ ಸಹಾಯಕ್ಕೆ ಬಂದ ಇಬ್ಬರಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.

ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು. ಸದ್ಯ ಅಪಘಾತದ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯಾರೊಬ್ಬರಿಗೂ ಪ್ರಾಣಾಪಾಯವಾಗಿಲ್ಲ. ಆದರೆ ಅಪಘಾತದ ಬಳಿಕ ಸಹಾಯಕ್ಕೆ ಬಂದ ಕಿರಣ್ ಹಾಗೂ ರವಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬ ಡೆಲಿವರಿ ಬಾಯ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಕಾರು ಅಪಘಾತವಾದ ಬಳಿಕ ಅದರಲ್ಲಿದ್ದವರು ಸಹಾಯಕ್ಕೆ ಕೆಲ ಹುಡುಗರನ್ನು ಫೋನ್ ಮಾಡಿ ಕರೆದಿದ್ದರು. ಆದರೆ ಸ್ಥಳದಲ್ಲೇ ವಿದ್ಯುತ್ ತಂತಿಯೊಂದು ತುಂಡಾಗಿದ್ದುದು ಯಾರಿಗೂ ತಿಳಿದಿರಲಿಲ್ಲ. ಯುವಕರು ಸಹಾಯಕ್ಕೆ ಆಗಮಿಸಿ ಕಾರನ್ನು ಎತ್ತಲು ಮುಂದಾದಾಗ ವಿದ್ಯುತ್ ತಂತಿ ತುಳಿದು ನಾಲ್ವರಿಗೆ ವಿದ್ಯುತ್ ಶಾಕ್ ಹೊಡೆದಿತ್ತು. ಘಟನೆಯಲ್ಲಿ ಕಿರಣ್ ಹಾಗೂ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಡೆಲಿವರಿ ಬಾಯ್‌ನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಡ್ರೈವರ್ ಅಮಾನತು

ಮೃತ ವ್ಯಕ್ತಿಗಳ ಕುಟುಂಬ ಬಡತನದವರಾಗಿದ್ದು, ಕೆಪಿಟಿಸಿಎಲ್ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವಂತೆ ಸಂಬಂಧಿಕರು ಒತ್ತಾಯಿಸಿದ್ದಾರೆ. ಘಟನೆ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಪತಿಯನ್ನ ಮಂಚಕ್ಕೆ ಕಟ್ಟಿಹಾಕಿ ಕೊಂದು, ಐದು ತುಂಡುಗಳಾಗಿ ಕತ್ತರಿಸಿ ಎಸೆದ ಪತ್ನಿ!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್