ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಬಯೋಪಿಕ್ ಚಿತ್ರಕ್ಕೆ ಚಾಲನೆ

Public TV
1 Min Read

ನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾದ ಚಿತ್ರಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದೆ. ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಕಲಾವಿದರ ಆಯ್ಕೆ ಕೂಡ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಇದೆ.

ಚಿತ್ರರಂಗದಲ್ಲಿ ಬಯೋಪಿಕ್ (Biopic) ಸಿನಿಮಾಗಳ ಹಾವಳಿ ಜಾಸ್ತಿಯಾಗಿದೆ. ಕ್ರಿಕೆಟ್, ಸಿನಿಮಾ, ಉದ್ಯಮ ಹೀಗೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನ ತೆರೆಯ ಮೇಲೆ ತೋರಿಸಲಾಗುತ್ತದೆ. ಇದೀಗ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಯೋಪಿಕ್ ತೆರೆಗೆ ತರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.

ರಾಜಕೀಯ (Politics) ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ (Sathyaratanam)  ರೆಡಿಯಾಗಿದ್ದಾರೆ. ಇನ್ನೂ ವಿಶೇಷ ಅಂದ್ರೆ ಸಿದ್ದರಾಮಯ್ಯ ಅವರ ಪಾತ್ರಕ್ಕೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ(Vijay Sethupathi) ಬಣ್ಣ ಹಚ್ಚಲಿದ್ದಾರೆ ಎಂದು ಮೂಲಗಳ ಪ್ರಕಾರ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ:ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಜೈ ಜಗದೀಶ್ ಪುತ್ರಿ ವೈಭವಿ

ಕೊಪ್ಪಳದ ಮೂಲದ ನಿರ್ಮಾಪಕರಿಂದ ಚಿಂತನೆ ನಡೆಸಿದ್ದಾರೆ. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

 

ಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹೈ ಬಜೆಟ್‌ನಲ್ಲಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಸದ್ಯದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ ಬಗ್ಗೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ಸಿಗಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್