ಕೂಡಲೇ ಕರ್ನಾಟಕದಿಂದ ಕಾವೇರಿ ನೀರು ಬಿಡುವಂತೆ ನಿರ್ದೇಶಿಸಿ – ಮೋದಿಗೆ ಸ್ಟಾಲಿನ್‌ ಪತ್ರ

Public TV
3 Min Read

ಚೆನ್ನೈ: ಕರ್ನಾಟಕದಿಂದ ಕಾವೇರಿ ನೀರು (Cauvery Water) ಬಿಡುವಂತೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ತಮಿಳುನಾಡು ಸಿಎಂ ಸ್ಟಾಲಿನ್‌ (CM Stalin) ಪತ್ರ ಬರೆದಿದ್ದಾರೆ.

ಜೂನ್, ಜುಲೈ ಅವಧಿಯಲ್ಲಿ ಕರ್ನಾಟಕ 40 ಟಿಎಂಸಿ ನೀರನ್ನು ಹರಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಕೇವಲ 11 ಟಿಎಂಸಿ ನೀರು ಮಾತ್ರ ಹರಿಸಿದೆ. ಕುರುವೈ ಭತ್ತ ಉಳಿಸಿಕೊಳ್ಳಲು ನೀರಿನ ಅಗತ್ಯವಿದೆ. ಕರ್ನಾಟಕದ (Karnataka) ಬಳಿ ನೀರಿದ್ದರೂ ರಾಜ್ಯಕ್ಕೆ ನೀರು ಬಿಡದೇ ಬಾಕಿ ಉಳಸಿಕೊಂಡಿದೆ ಎಂದು ಉಲ್ಲೇಖಿಸಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವಾಲಯಕ್ಕೂ ಈಗಾಗಲೇ ಮನವಿ ಮಾಡಲಾಗಿದೆ. ನೀವೂ ನಿರ್ದೇಶನ ನೀಡುವಂತೆ ಕೋರಿ ಸ್ಟಾಲಿನ್‌ ಮನವಿ ಮಾಡಿದ್ದಾರೆ.

ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ.ಸುಧೀರ್ ನಾರಿಯನ್, ನ್ಯಾ.ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು (ನ್ಯಾಯಾಲಯಗಳು ವಿಚಾರಣೆ ನಡೆಸಿ ತೀರ್ಪು ನೀಡುತ್ತವೆ. ನ್ಯಾಯಾಧಿಕರಣಗಳು ವಿಚಾರಣೆ ನಡೆಸಿ ನೀಡುವ ಮಧ್ಯಂತರ/ಅಂತಿಮ ತೀರ್ಪಿಗೆ ಐತೀರ್ಪು (Award) ಎಂದು ಕರೆಯಲಾಗುತ್ತದೆ) ಪ್ರಕಟಿಸಿತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10, ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು.

ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು.

ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಿರುತ್ತಾರೆ. ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೊಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನ ಅಧಿಕಾರಿಗಳು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.

 

ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್