ಸೆಲ್ಫಿ ಹುಚ್ಚು – ಕಾಲು ಜಾರಿ ನದಿಯಲ್ಲಿ ಕೊಚ್ಚಿಹೋಗಿ ವ್ಯಕ್ತಿ ಸಾವು

Public TV
2 Min Read

ಮಡಿಕೇರಿ: ವಾರದ ಹಿಂದೆಯಷ್ಟೇ ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಉಡುಪಿ ಜಿಲ್ಲೆಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಶರತ್ ಕುಮಾರ್ (23) ಪ್ರಕರಣ ಮಾಸುವ ಮುನ್ನವೇ ಸೆಲ್ಫಿ ಹುಚ್ಚಿಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯ (Harangi Dam) ಮುಂಭಾಗದ ಸೇತುವೆ ಬಳಿ ನಡೆದಿದೆ.

ಬೆಂಗಳೂರು ಮೂಲದ ಸಂದೀಪ್ (41) ಸೆಲ್ಫಿ ಕ್ರೇಜ್‌ಗೆ ಬಲಿಯಾದ ವ್ಯಕ್ತಿ. ಗುರುವಾರ ಸಂದೀಪ್ ತನ್ನ ಮೂವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಕೊಡಗಿನ ಗೋಣಿಕೊಪ್ಪ ಹಾಗೂ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ್ದರು. ಕಾರಿನಲ್ಲಿ ಬಂದ ಸಂದೀಪ್ ಹಾಗೂ ಆತನ ಗೆಳೆಯರು ಹಾರಂಗಿ ಮುಂಭಾಗದ ಸೇತುವೆ ಬಳಿ ಹೋಗಿ ಜಲಾಶಯದಿಂದ ಕಾವೇರಿ ನದಿಗೆ 4 ಕ್ರಸ್ಟ್ರರ್ ಗೇಟ್ ಮೂಲಕ ನೀರು ಬಿಟ್ಟಿರುವುದನ್ನು ಕಂಡು ಸೆಲ್ಫಿ ತೆಗೆಯಲು ಮುಂದಾಗಿದ್ದರು. ಸೇತುವೆ ಕಟ್ಟೆ ಮೇಲೆ ನಿಲ್ಲುವ ವೇಳೆ ಸಂದೀಪ್ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದಿದ್ದಾನೆ.

ನದಿಗೆ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ನದಿಯಲ್ಲೇ ತೇಲಿಕೊಂಡು ಹೋಗಿದ್ದ ಸಂದೀಪ್‌ನನ್ನು ಸ್ಥಳೀಯರು ರಕ್ಷಣೆ ಮಾಡಲು ಮುಂದಾಗಿದ್ದರು. ಆದರೆ ಯಾವುದೇ ಪ್ರಯೋಜನವಾಗಲ್ಲಿಲ್ಲ. ಬಳಿಕ ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ಸಂದೀಪ್ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಕುಶಾಲನಗರ ಅಗ್ನಿಶಾಮಕ ಸಿಬ್ಬಂದಿ ದುಬಾರೆ ರಿವರ್ ರ‍್ಯಾಪ್ಟಿಂಗ್ ತಂಡ ಹಾಗೂ ಈಜು ತಜ್ಞರಿಂದ ಮೃತದೇಹಕ್ಕೆ ಹುಡುಕಾಟ ನಡೆಸಿದೆ. ಹಾರಂಗಿ ಹೊರ ಹರಿವು ಸ್ಥಗಿತಗೊಳಿಸಿ ಹುಡುಕಾಟ ನಡೆಸಿದ ಸಂದರ್ಭ ಸೇತುವೆ ಮುಂಭಾಗದಲ್ಲಿ ಮೃತದೇಹ ಗೋಚರವಾಗಿದೆ. ಇದನ್ನೂ ಓದಿ: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿಚಾರಣಾಧೀನ ಕೈದಿ ಎಸ್ಕೇಪ್

ಈ ದುರಂತಕ್ಕೆ ನೇರವಾಗಿ ಹಾರಂಗಿ ಜಲಾಶಯ ಅಧಿಕಾರಿಗಳೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕುಶಾಲನಗರ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಟ್ಟುನಿಟ್ಟಿನ ಕ್ರಮ; ಅಪಘಾತಗಳ ಸಂಖ್ಯೆ ಇಳಿಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್