ಇಡೀ ಭಾರತ ನನ್ನ ಮನೆ: ಬಂಗಲೆಗೆ ಮರಳಿದ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ

Public TV
1 Min Read

ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ದೆಹಲಿಯ (New Delhi) ಅವರ 12 ತುಘಲಕ್ ಲೇನ್ ಬಂಗಲೆಯನ್ನು ಮರು ಹಂಚಿಕೆ ಮಾಡಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಅವರು ಈ ವರ್ಷದ ಏಪ್ರಿಲ್‌ನಲ್ಲಿ ಬಂಗಲೆಯನ್ನು ಖಾಲಿ ಮಾಡಿದ್ದರು. ಇದೀಗ ‘ಮೋದಿ’ ಉಪನಾಮ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಅವರ ಸಂಸದ ಸ್ಥಾನಮಾನ ಮರಳಿದ ಕಾರಣ, ಬಂಗಲೆಯನ್ನು ಅವರಿಗೆ ಮತ್ತೆ ಮಂಜೂರು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೌನ ವೃತದಲ್ಲಿರುವ ಮೋದಿ ಮಾತನಾಡಿಸಲು ಅವಿಶ್ವಾಸ ನಿರ್ಣಯ – ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಟೀಕೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಮೇರಾ ಘರ್ ಪೂರಾ ಹಿಂದೂಸ್ತಾನ್ ಹೈ (ಇಡೀ ಭಾರತ ನನ್ನ ಮನೆ) ಎಂದು ಹೇಳಿದರು. 2004ರಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ಗೆದ್ದ ನಂತರ ರಾಹುಲ್‌ಗೆ ಮೊದಲ ಬಾರಿಗೆ ಬಂಗಲೆ ಮಂಜೂರಾಗಿತ್ತು.

12 ತುಘಲಕ್ ಲೇನ್‌ನಲ್ಲಿರುವ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಲೋಕಸಭೆಯ ವಸತಿ ಸಮಿತಿಯು ರಾಹುಲ್ ಗಾಂಧಿಗೆ ನೋಟಿಸ್ ನೀಡಿತ್ತು. ಈ ಬಗ್ಗೆ ಲೋಕಸಭೆಯ ಸೆಕ್ರೆಟರಿಯೇಟ್‌ನಲ್ಲಿನ ಉಪ ಕಾರ್ಯದರ್ಶಿ ಮೋಹಿತ್ ರಾಜನ್‌ಗೆ ಪತ್ರ ಬರೆದಿದ್ದ ರಾಹುಲ್ ಗಾಂಧಿ ತುಘಲಕ್ ಲೇನ್‌ನಲ್ಲಿರುವ ನನ್ನ ವಾಸ್ತವ್ಯವನ್ನು ರದ್ದುಗೊಳಿಸಿದ ಕುರಿತು ನಿಮ್ಮ ಪತ್ರಕ್ಕೆ ಧನ್ಯವಾದಗಳು ಎಂದು ಹೇಳಿದ್ದರು. ಇದನ್ನೂ ಓದಿ: ಅನರ್ಹತೆ ಆದೇಶ ವಾಪಸ್ ಬಳಿಕ ಮೊದಲ ಬಾರಿಗೆ ವಯನಾಡ್‌ಗೆ ಭೇಟಿ ನೀಡಲಿರುವ ರಾಗಾ

ನಾನು ಇಲ್ಲಿ ಕಳೆದ ಸಮಯದ ಸಂತೋಷದ ನೆನಪುಗಳು ಮತ್ತು ಜನರ ಆದೇಶಕ್ಕೆ ಋಣಿಯಾಗಿರುವುದಾಗಿ ಪತ್ರದಲ್ಲಿ ಹೇಳಿದ್ದರು. ಯಾವುದೇ ಪೂರ್ವಾಗ್ರಹವಿಲ್ಲದೆ, ನಾನು ಖಂಡಿತವಾಗಿಯೂ ನಿಮ್ಮ ಪತ್ರದಲ್ಲಿರುವ ವಿವರಗಳಿಗೆ ಬದ್ಧನಾಗಿರುತ್ತೇನೆ ಎಂದು ಅವರು ತಿಳಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್