ಹರಿಶ್ಚಂದ್ರ ಘಾಟ್‌ನಲ್ಲಿ ಸಂಜೆ 4 ಗಂಟೆಗೆ ಸ್ಪಂದನಾ ಅಂತ್ಯಸಂಸ್ಕಾರ

By
1 Min Read

ವಿಜಯ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana) ಅವರ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಇಂದು ಸಂಜೆ (ಆಗಸ್ಟ್‌ 9) 4 ಗಂಟೆಗೆ ಸ್ಪಂದನಾ ಕಡೆಯ ಹಂತದ ವಿಧಿ ವಿಧಾನ ಪದ್ಧತಿ ನಡೆಯಲಿದೆ. ಈಡಿಗ ಪದ್ಧತಿಯಂತೆ ಅಂತ್ಯಸಂಸ್ಕಾರ ನಡೆಯಲಿದೆ.

ಸ್ಪಂದನಾ ತಂದೆ ಬಿ.ಕೆ ಶಿವರಾಂ ಅವರ ಮನೆಯಲ್ಲಿ ಸ್ಪಂದನಾ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದರು. ಕನ್ನಡದ ಚಿತ್ರರಂಗದ ಹಲವು ಸೆಲೆಬ್ರಿಟಿಗಳು, ಆಪ್ತರು, ರಾಜಕೀಯ ಗಣ್ಯರು, ಅಭಿಮಾನಿಗಳು ಬಂದು ಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದ್ದರು. ಇದೀಗ ಮಧ್ಯಾಹ್ನ 3 ಗಂಟೆಗೆ ಅಂತಿಮ ಯಾತ್ರೆ ಶುರುವಾಗಲಿದೆ. ಬಳಿಕ ಸಂಜೆ 4ಕ್ಕೆ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಇದನ್ನೂ ಓದಿ:ವಿಜಯ ರಾಘವೇಂದ್ರಗೆ ಧೈರ್ಯ ತುಂಬಿದ ಯಶ್

ಕಳೆದ ವಾರ ಕಾಲೇಜು ಸ್ನೇಹಿತರೊಂದಿಗೆ ಥಾಯ್‌ಲ್ಯಾಂಡ್‌ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಭಾನುವಾರ ಶಾಪಿಂಗ್‌ಗೆ ಹೊರಟಿದ್ದರು. ಸಂಜೆ ಶಾಪಿಂಗ್ ಮುಗಿಸಿ ಹೋಟೆಲ್ ನತ್ತ ಹೋಗ್ಬೇಕಾದ್ರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ನೇಹಿತರು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್