ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ – ಸೇತುವೆ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಗೆ ಬಿದ್ದ ಸಾರಿಗೆ ಬಸ್

Public TV
1 Min Read

ಮಂಡ್ಯ: ರಾಷ್ಟ್ರೀಯ ಹೆದ್ದಾರಿಯಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ತೆಗೆದಿದ್ದ ಹಳ್ಳಕ್ಕೆ ಕೆಎಸ್‍ಆರ್‌ಟಿಸಿ (KSRTC) ಬಸ್ ಬಿದ್ದಿರುವ ಘಟನೆ ಮಾರೇಹಳ್ಳಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಚಾಲಕನಿಗೆ ತೀವ್ರ ಗಾಯಗಳಾಗಿದೆ. ಕೆಲವು ಪ್ರಯಾಣಿಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಚಾಲಕ ಹಾಗೂ ಪ್ರಯಾಣಿಕರಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತಕ್ಕೆ ಸೇತುವೆ ಕಾಮಗಾರಿ ಬಗ್ಗೆ ಸೂಚನಾ ಫಲಕ ಅಳವಡಿಸದೆ ಇರುವುದೇ ಕಾರಣ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ನಾಳೆ ಸಿಎಂ ಅಥಣಿ ಕ್ಷೇತ್ರ ಪ್ರವಾಸ – ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬಸ್ (Bus) ತಲಕಾಡಿನಿಂದ ಮಳವಳ್ಳಿ ಕಡೆಗೆ ಮಾರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ತೆರಳುತ್ತಿತ್ತು. ಈ ವೇಳೆ ಬಸ್ ಸೇತುವೆ ನಿರ್ಮಾಣಕ್ಕೆ ತೆಗೆದಿದ್ದ ಹಳ್ಳಕ್ಕೆ ನುಗ್ಗಿದೆ. ಬಸ್ ಹಳ್ಳಕ್ಕೆ ಬೀಳುತ್ತಿದ್ದಂತೆ ಪಿಲ್ಲರ್‌ಗಳಿಗೆ ಹಾಕಿದ್ದ ಕಬ್ಬಿಣದ ಸಲಾಕೆಗಳು ಬಾಗಿವೆ. ಅದೃಷ್ಟವಶಾತ್ ಬಸ್ ನೇರವಾಗಿ ಹಳ್ಳಕ್ಕೆ ಇಳಿದಿದೆ. ಬಸ್ ಪಲ್ಟಿಯಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂಬ ಮಾತುಗಳು ಕೇಳಿಬಂದಿದೆ. ಇದನ್ನೂ ಓದಿ: ರೊಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 17 ಮಂದಿ ಸಾವು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್