ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ – ರೌಡಿಶೀಟರ್ ಕಾಲಿಗೆ ಗುಂಡೇಟು

Public TV
1 Min Read

ರಾಮನಗರ: ಸ್ಥಳ ಮಹಜರು ಮಾಡುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಪೊಲೀಸರು (Police) ಗುಂಡೇಟು ಹೊಡೆದಿದ್ದಾರೆ.

ರಾಮನಗರ (Ramanagara) ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಮತೀನ್ ಗುಂಡೇಟು ತಿಂದ ಆರೋಪಿಯಾಗಿದ್ದಾನೆ. ಈತ ಕಳೆದ 3 ದಿನಗಳ ಹಿಂದೆ ನಡೆದ ಗಲಾಟೆ ಪ್ರಕರಣ ಎ1 ಆರೋಪಿಯಾಗಿದ್ದ. ಈ ಹಿನ್ನೆಲೆಯಲ್ಲಿ ಮತೀನ್‍ನನ್ನ ಬಂಧಿಸಿದ್ದ ಪೊಲೀಸರು ಈ ದಿನ ಸಂಜೆ ಮಹಜರು ಮಾಡಲು ಘಟನಾ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಇಬ್ಬರು ಪೊಲೀಸರ ಮೇಲೆ ಮತೀನ್ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಡಿವೈಎಸ್ಪಿ ದಿನಕರ ಶೆಟ್ಟಿ, ಮತೀನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ ವೃದ್ಧೆಗೆ ಚಿತ್ರಾನ್ನ ತಿನ್ನಿಸಿ 10,000 ನಗದು, ಮೊಬೈಲ್ ದೋಚಿ ಪರಾರಿ!

ಗಾಯಗೊಂಡಿರುವ ಆರೋಪಿ ಮತೀನ್‍ನನ್ನು ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಪೊಲೀಸರಿಗೂ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಘಟನಾ ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ, ಎಎಸ್ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ದಂಪತಿಗೆ ಪ್ರಧಾನಿ ಆಹ್ವಾನ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್