ಕರಾವಳಿಯಲ್ಲಿ ನಡೆಯುತ್ತೆ ಪ್ರೇತಾತ್ಮಗಳ ವಿವಾಹ- ಮೃತಪಟ್ಟವರ ಆಸೆ ಈಡೇರಿಸೋ ವಿಶಿಷ್ಠ ಆಚರಣೆ

Public TV
2 Min Read

ಮಂಗಳೂರು: ಅದೊಂದು ತುಳುನಾಡಿನಲ್ಲಿ ನಡೆಯೋ ವಿಭಿನ್ನ ಮದುವೆ. ಮದುವೆಯಾದ ಜೋಡಿ ಸುಖವಾಗಿರಲಿ ಎಂದು ಹಾರೈಸಿ ಹಿರಿಯರ ಆಶೀರ್ವಾದ ಕೂಡ ನವಜೋಡಿಗಳಿಗೆ ಸಿಕ್ಕಿತ್ತು. ವಿಶೇಷ ಅಂದ್ರೆ ಆ ನವಜೋಡಿಗಳು ಮದುವೆಯ ಸಮಾರಂಭದಲ್ಲಿದ್ದ ಯಾರ ಕಣ್ಣಿಗೂ ಕಾಣಿಸದೇ ಹಸಮಣೆ ಏರಿ ಎಲ್ಲಾ ಶಾಸ್ತ್ರ ಮುಗಿಸಿದ್ರು.

ಹೌದು. ದಕ್ಷಿಣ ಕನ್ನಡ (Dakshina Kannada) ಹಾಗೂ ಉಡುಪಿ (Udupi) ಜಿಲ್ಲೆಗಳಲ್ಲಿ ವರ್ಷಕ್ಕೊಂದು ಬಾರಿ ಇಂತಹ ಮದುವೆಗಳು ನಡೆಯುತ್ತವೆ. ತುಳು ಮಾಸ ಆಟಿ (ಆಷಾಢ) ಅಂದ್ರೆ ಯಾವುದೇ ಶುಭಕಾರ್ಯಗಳು ಕರಾವಳಿ ಭಾಗದಲ್ಲಿ ನಡೆಯೋದಿಲ್ಲ. ಆದರೆ ಈ ಸಮಯದಲ್ಲಿ ಕುಟುಂಬದಲ್ಲಿ ಯಾರಾದ್ರೂ ಮದುವೆಯಾಗದೇ ಅಕಾಲಿಕವಾಗಿ ಮೃತಪಟ್ಟಿದ್ದರೆ ಅಂತವರ ಮದುವೆ ಮಾಡೋ ಸಂಪ್ರದಾಯ ಇದೆ. ಇಲ್ಲೂ ನಡೆದಿರೋದು ಅಂತಹದೇ ಒಂದು ಮದುವೆಯ ಸಂಪ್ರದಾಯ. ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿಯ ವಧುವಿನ ಕುಟುಂಬ ಹಾಗೂ ಉಳ್ಳಾಲ (Ullala) ತಾಲೂಕಿನ ಕೋಣಾಜೆ (Konaje) ಸಮೀಪದ ಬೊಳ್ಮ ಎಂಬಲ್ಲಿಯ ವರನ ಕುಟುಂಬದ ನಡುವೆ ಮದುವೆ ಸಂಬಂಧ ಏರ್ಪಟ್ಟಿದೆ.

ಬಂಟ್ವಾಳ ತಾಲೂಕಿನ ವಗ್ಗದ ಮಾಂಗಜೆ ಎಂಬಲ್ಲಿಯ ಸಂಜೀವ ಪೂಜಾರಿಯವರ ಮಗಳು ವಿಶಾಲಾಕ್ಷಿ 2 ವರ್ಷದ ಮಗುವಾಗಿದ್ದಾಗ ಅಂದ್ರೆ ಸರಿ ಸುಮಾರು 35 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಇತ್ತ ಉಳ್ಳಾಲದ ಕೊಣಾಜೆ ಸಮೀಪದ ಬೊಳ್ಮ ಗ್ರಾಮದ ಲಕ್ಷ್ಮಣ ಪೂಜಾರಿಯವರ ಪುತ್ರ ಧರಣೇಶ್ ಕಳೆದ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಟೊಮೆಟೋ ಬಳಿಕ ಬಾಳೆಹಣ್ಣಿಗೆ ಬಂಗಾರದ ಬೆಲೆ- 1 ಕೆಜಿ ಏಲಕ್ಕಿ ಬಾಳೆ 80 ರೂ.ಗೆ ಮಾರಾಟ

ಹೃದಯದ ತೊಂದರೆ ಇದ್ದ ಕಾರಣ ಧರಣೇಶ್ ಅವರಿಗೆ ಮದುವೆ ಮಾಡುವ ಬಗ್ಗೆ ಮನೆಯವರು ಯೋಚನೆ ಮಾಡಿರಲಿಲ್ಲ. ಆದರೆ ಧರಣೇಶ್‍ಗೆ ಮದುವೆ ಆಗಬೇಕು ಅನ್ನೋ ಆಸೆ ಇತ್ತಾದ್ರೂ ಹೃದಯದ ಕಾಯಿಲೆಯಿಂದ ಗುಣಮುಖವಾಗದೆ ಮೃತಪಟ್ಟಿದ್ದರು. ವಧುವಿನ ಕಡೆಯವರಿಗೆ ಜ್ಯೋತಿಷ್ಯದಲ್ಲಿ ಕಂಡು ಬಂದಂತೆ ವಿಶಾಲಕ್ಷಿಗೆ ಮದುವೆ ಮಾಡಬೇಕಾಗಿತ್ತು. ಈ ವೇಳೆ ವರಾನ್ವೇಶಣೆ ನಡೆಸಿದಾಗ ಧರಣೇಶನ ಸಂಬಂಧ ಸಿಕ್ಕಿ ಎಲ್ಲಾ ಮಾತುಕತೆ ನಡೆಸಿ ಸಂಪ್ರದಾಯದಂತೆ ಮದುವೆ ಕಾರ್ಯ ಮಾಡಲಾಗಿದೆ.

ತುಳುನಾಡಿನಲ್ಲಿ ಆಷಾಡ ಮಾಸದಲ್ಲಿ ನಡೆಯೋ ಈ ಪ್ರೇತಗಳ ಮದುವೆ ವಿಚಿತ್ರ ಅನಿಸಿದ್ರೂ, ಬಹಳಷ್ಟು ವರ್ಷದಿಂದ ಇದು ನಡೆದುಕೊಂಡು ಬಂದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಕ್ಕಿಲ್ಲದೆ ಇದ್ರೆ ಕುಟುಂಬದ ಸದಸ್ಯರಿಗೆ ಒಂದಲ್ಲಾ ಒಂದು ಸಮಸ್ಯೆ ಕಾಡುತ್ತೆ. ಮದುವೆಯಾಗಲು ಹೊರಟ ಯುವಕ ಯುವತಿಯರಿಗೂ ನಾನಾ ತೊಂದರೆ ಎದುರಾಗುತ್ತದೆ. ಈ ರೀತಿ ಕುಟುಂಬದಲ್ಲಿ ಕಾಣಿಸುವ ಸಮಸ್ಯೆಗಳಿಗೆ ಜ್ಯೋತಿಷ್ಯದಲ್ಲಿ ಕಂಡು ಬರುವ ಪರಿಹಾರವಾಗಿ ಈ ರೀತಿಯ ಮದುವೆಗಳು ನಡೆಯುತ್ತದೆ. ಈ ಪ್ರೇತಾತ್ಮಗಳ ಮದುವೆ ತುಳು ಸಂಪ್ರದಾಯದ ಕಟ್ಟುಪಾಡುಗಳಂತೆ ನಡೆಯೋದೆ ಒಂದು ವಿಶೇಷ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್