ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು

Public TV
1 Min Read

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಸೋಲನ್ (Solan) ಜಿಲ್ಲೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ್ದು, 7 ಜನರು ಬಲಿಯಾಗಿರುವ ಘಟನೆ ನಡೆದಿದೆ.

ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ವರದಿಯಾಗಿದೆ.

ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಬೆಂಬಲವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.

ಭಾರೀ ಮೆಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುಡ್ಡಗಾಡಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಹಾನಿಯ ಕುರಿತು ಪ್ರತಿಕ್ರಿಯೆಗಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:‌ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ

ರಸ್ತೆಗಳು ಮುಚ್ಚಿರುವ ಬಗ್ಗೆ ಹಾಗೂ ಭೂಕುಸಿತದಿಂದ ಆಗಿರುವ ಹಾನಿಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಡಳಿತ ಸಿಬ್ಬಂದಿ ಎಚ್ಚೆತ್ತುಕೊಳ್ಳಬೇಕು ಹಾಗೂ ರಸ್ತೆ, ವಿದ್ಯುತ್ ಮತ್ತು ನೀರಿನ ವ್ಯವಸ್ಥೆಗಳನ್ನು ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇದನ್ನೂ ಓದಿ: 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ – ಶಾಸಕ ಯತ್ನಾಳ್ ಭವಿಷ್ಯ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್