ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ – ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

Public TV
2 Min Read

ಬೆಂಗಳೂರು: ತಮಿಳುನಾಡು (Tamil Nadu) ಸರ್ಕಾರ ಕಾವೇರಿ ನೀರಿನ (Kaveri Water) ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ (Letter) ಬರೆದಿದ್ದಾರೆ.

ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್‌ಗೆ (Supreme Court) ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರುಗಳಾದ ಡಿಕೆಶಿ ಕಾರಣ: ಎಸ್‌.ಟಿ.ಸೋಮಶೇಖರ್‌

ಪತ್ರದಲ್ಲಿ ಏನಿದೆ?
ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲ್ಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ ಆಗಸ್ಟ್ 6ಕ್ಕೆ 14.054 ಟಿಎಂಸಿ ನೀರು ಬಿಡುಗಡೆಯಾಗಿರುವುದು ಮಾಧ್ಯಮಗಳಿಂದ ತಿಳಿದಿದೆ. ಒಟ್ಟು ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ಈ ವರ್ಷ 83.831 ಟಿಎಂಸಿ ನೀರು ಬಂದಿರುತ್ತದೆ. ತಮಿಳುನಾಡು ಕುರುವೈ ಬೆಳೆಗೆ 32 ಟಿಎಂಸಿ ನೀರು ಬಳಸಬೇಕು. ಆದರೆ ತಮಿಳುನಾಡು ಆಗಸ್ಟ್ 7ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು, ಸಿಡಬ್ಲ್ಯುಡಿಟಿ ಆದೇಶದ ಎರಡು ಪಟ್ಟು ಹೆಚ್ಚಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ: ಯಡಿಯೂರಪ್ಪ

ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೇ  ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಸಿಡಬ್ಲ್ಯುಡಿಟಿ ಅಧಿಕಾರಿಗಳು ಸಿಡಬ್ಲ್ಯುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನಿದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ. ಈಗಿರುವ ನಮ್ಮ ನಾಲ್ಕು ಡ್ಯಾಮ್‌ಗಳ ನೀರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಖಾರೀಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ. ಇದನ್ನೂ ಓದಿ: ಗುದ್ದಲಿ ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ?- ಬಿಜೆಪಿಗೆ ಹೆಬ್ಬಾಳ್ಕರ್ ತಿರುಗೇಟು

ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನ್ಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್