ಗಡಿ ಪ್ರದೇಶಗಳಲ್ಲಿ ಶಾಂತಿ ಕಾಪಾಡಲು ಚೀನಾ ಒಪ್ಪಿದೆ: MEA

Public TV
2 Min Read

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ (LAC) ಉದ್ದಕ್ಕೂ ಉಳಿದಿರುವ ಸಮಸ್ಯೆಗಳನ್ನು ವಿಳಂಬವಿಲ್ಲದೆ ಪರಿಹರಿಸಲು ಭಾರತ (India) ಮತ್ತು ಚೀನಾ (China) ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿದೆ. ಮಂಗಳವಾರ ನಡೆದ 19ನೇ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಬಳಿಕ ಬುಧವಾರ ಸಚಿವಾಲಯ ತನ್ನ ಹೇಳಿಕೆ ಪ್ರಕಟಿಸಿದೆ.

ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ ಕಾರ್ಪ್ಸ್ ಕಮಾಂಡರ್ ಮಟ್ಟದ 19ನೇ ಸುತ್ತಿನ ಮಾತುಕತೆ ನಡೆಯಿತು. ಎರಡು ದೇಶಗಳ ನಡುವಿನ ಸಮಸ್ಯೆ ಬಗ್ಗೆ ಧನಾತ್ಮಕ, ರಚನಾತ್ಮಕ ಮತ್ತು ಆಳವಾದ ಮಾತುಕತೆ ನಡೆಸಿದೆ. ಆದರೆ ಉಳಿದ ಘರ್ಷಣೆಯ ಬಿಂದುಗಳಲ್ಲಿ ಸೈನ್ಯವನ್ನು ಹಿಂಪಡೆಯುವ ತಕ್ಷಣದ ಪ್ರಗತಿಯನ್ನು ವರದಿ ಮಾಡಲಾಗಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.

ಉಳಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಮಾತುಕತೆ ನಡೆಸಲು ಮತ್ತು ಈ ಮಾತುಕತೆ ವೇಗವನ್ನು ಕಾಪಾಡಿಕೊಳ್ಳಲು ಚೀನಾ ಒಪ್ಪಿಕೊಂಡಿದೆ. ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳಲು ಉಭಯ ಕಡೆಯಿಂದ ಒಪ್ಪಿಕೊಳ್ಳಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ನೆಹರೂ ಸ್ಮಾರಕ ಇನ್ಮುಂದೆ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ – ಕೇಂದ್ರದಿಂದ ಹೆಸರು ಮರುನಾಮಕರಣ

2020 ರಲ್ಲಿ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಗಳು ಪ್ರಾರಂಭವಾದಾಗಿನಿಂದ ಎರಡೂ ಕಡೆಯಿಂದ 5 ಘರ್ಷಣೆ ಬಿಂದುಗಳಿಂದ ಸೇನೆಯನ್ನು ಯಶಸ್ವಿಯಾಗಿ ಹಿಂಪಡೆಯಲಾಗಿದೆ. ಇತ್ತೀಚಿನ ಮಾತುಕತೆಗಳು ಡೆಪ್ಸಾಂಗ್ ಪ್ಲೇನ್ಸ್ ಮತ್ತು ಡೆಮ್‌ಚೋಕ್‌ನಿಂದ ಸೇನೆ ಹಿಂಪಡೆಯುವುದಾಗಿದೆ. ಬಿಕ್ಕಟ್ಟು ಬಗೆಹರಿಯುವವರೆಗೆ ಚೀನಾದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ ಎಂದು ಭಾರತ ನಿರಂತರವಾಗಿ ಒತ್ತಿ ಹೇಳಿದೆ.

ಜಿ20 ನಾಯಕರ ಶೃಂಗಸಭೆಗೆ ಒಂದು ತಿಂಗಳ ಮೊದಲು ಈ ಮಾತುಕತೆ ನಡೆದಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೆಪ್ಟೆಂಬರ್ 9 ಮತ್ತು 10 ರಂದು ಭಾರತದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಕುಂಭದ್ರೋಣ ಮಳೆ – 66 ಮಂದಿ ಸಾವು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್