ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ: ಬೊಮ್ಮಾಯಿ ಆಗ್ರಹ

Public TV
1 Min Read

ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು (Cavery Water) ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ (Supreme Court) ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ: ಡಿಕೆಶಿ

ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್