ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ – 25 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ

Public TV
2 Min Read

ಮೈಸೂರು: ಕಿಂಗ್ ಫಿಷರ್ (Kingfisher) ಬಿಯರ್‌ನಲ್ಲಿ (Beer) ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ (Department of Excise) ಜಪ್ತಿ ಮಾಡಿದೆ.

ಜುಲೈ 15ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್‌ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್‌ನಲ್ಲಿ ದೃಢವಾಗಿದೆ. ವಿವಿಧ ಕೆಎಸ್‌ಬಿಸಿಎಲ್ ಹಾಗೂ ಆರ್‌ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು – ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಜುಲೈ 15 ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಈ ಅಂಶ ಪತ್ತೆಯಾಗಿದೆ. ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಆಗಸ್ಟ್ 2ರಂದು ಕೆಮಿಕಲ್ ವರದಿ ಬಂದಿದೆ. ವರದಿಯಲ್ಲಿ ಈ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂದು ತಿಳಿಸಿದೆ ಎಂದರು. ಇದನ್ನೂ ಓದಿ: ಬಿಎಂಟಿಸಿ ಬಸ್ ಹರಿದು 4ರ ಬಾಲಕಿ ಸಾವು

ಹೀಗಾಗಿ ಒಟ್ಟು 78,678 ಬಾಕ್ಸ್ ಬಿಯರ್ ಅನ್ನು ಜಪ್ತಿ ಮಾಡಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ಇದು ವಿತರಣೆಯಾಗಿತ್ತು. ರಿಟೇಲ್‌ನಲ್ಲಿ ಮಾರಾಟವಾಗದಂತೆ ಆಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎದೆ ಹಾಲು ಕುಡಿದು ಮಲಗಿದ್ದ 3 ತಿಂಗಳ ಪುಟ್ಟ ಕಂದಮ್ಮ ದುರ್ಮರಣ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್