ಚಂದ್ರಯಾನ-3: ಇಂದು ಮಧ್ಯಾಹ್ನ 1 ಗಂಟೆಗೆ ಮಹತ್ವದ ಬೆಳವಣಿಗೆ

By
1 Min Read

ಬೆಂಗಳೂರು: ಚಂದ್ರಯಾನ-3 ಕ್ಕೆ ಸಂಬಂಧಿಸಿದಂತೆ  ಇಂದು (ಗುರುವಾರ) ಮಧ್ಯಾಹ್ನ ಒಂದು ಗಂಟೆಗೆ ಮಹತ್ವದ ಬೆಳವಣಿಗೆ ನಡೆಯಲಿದೆ ಎಂದು ನೆಹರು ತಾರಾಲಯದ ವಿಜ್ಞಾನಿ ಆನಂದ್ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದು ಮಧ್ಯಾಹ್ನ 1 ಗಂಟೆಗೆ ಚಂದ್ರಯಾನ-3ರ  (Chandrayaan-3) ಮಹತ್ತರ ಬೆಳವಣಿಗೆ ನಡೆಯಲಿದೆ. ಚಂದ್ರಯಾನ-3 ನೌಕೆ ಅಂತಿಮ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ. ಉಡಾವಣಾ ವಾಹನದಲ್ಲಿರುವ ಲ್ಯಾಂಡರ್ ಮಾಡ್ಯೂಲ್ ಇಂದು ಮಧ್ಯಾಹ್ನ 1 ಗಂಟೆಗೆ ನೌಕೆಯಿಂದ ಬೇರ್ಪಡುವ ಕಾರ್ಯ ನಡೆಯಲಿದೆ ಎಂದರು. ಇದನ್ನೂ ಓದಿ: ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ ಚಂದ್ರಯಾನ ನೌಕೆ

ಮುಂದಿನ ವಾರದಲ್ಲಿ ವಿಕ್ರಮ್ ಲ್ಯಾಂಡರ್ ನ  ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗಲಿದೆ. ಆಗಸ್ಟ್ 23 ರಂದು ಚಂದ್ರಯಾನ -3 ಅಂತಿಮ ಸಕ್ಸಸ್ ಚಿತ್ರಣ ಗೊತ್ತಾಗಲಿದೆ. ಇಂತಹ ಲ್ಯಾಂಡರ್ ಮಾಡ್ಯೂಲ್ ‘ವಿಕ್ರಮ್’ ಅನ್ನು ಪ್ರತ್ಯೇಕಗೊಳಿಸುವ ಕಾರ್ಯ ನಡೆಯಲಿದೆ. ಈ ಪ್ರಕ್ರಿಯೆ ತುಂಬಾ ಪ್ರಮುಖವಾಗಿರೋದು. ಚಂದ್ರಯಾನ-3 ರ ಸಕ್ಸಸ್ ಗೆ ಇಡೀ ಭಾರತ ಕಾಯುತ್ತಿದೆ. ಹೀಗಾಗಿ ಇಂದು ಅತ್ಯಂತ ಮಹತ್ವದ ದಿನ ಎಂದು ಹೇಳಿದರು.

ಚಂದ್ರಯಾನ-3 ಮಿಷನ್‍ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್