ಅಧಿಕಾರ, ಹಣದ ಆಸೆಗೆ ಓಡೋಗಿದ್ದ ಹೆಬ್ಬಾರ್ ಈಗ್ಯಾಕೆ ಕಾಂಗ್ರೆಸ್‍ಗೆ ಬರ್ತಾರೆ ಹೇಳಲಿ: ಕೈ ಶಾಸಕ

By
1 Min Read

ಕಾರವಾರ: ಕಾಂಗ್ರೆಸ್‍ಗೆ ಯಲ್ಲಾಪುರದ ಬಿಜೆಪಿ (BJP) ಶಾಸಕ ಹಾಗೂ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ (Shivaram Hebbar) ಬರುವ ವಿಚಾರಕ್ಕೆ ಇದೀಗ ಜಿಲ್ಲಾ ಕಾಂಗ್ರೆಸ್‍ನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಶಿರಸಿಯ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ (Bhimanna Naik) ವಿರೋಧ ವ್ಯಕ್ತಪಡಿಸಿದ್ದಾರೆ.

ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಣ ಅಧಿಕಾರದ ಆಸೆಯಿಂದ ಕಾಂಗ್ರೆಸ್ (Congress) ಬಿಟ್ಟು ಓಡಿಹೋಗಿದ್ದಾರೆ. ಈಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದರಿಂದ ಅಧಿಕಾರ, ಹಣದ ಆಸೆಗೆ ಕಾಂಗ್ರೆಸ್‍ಗೆ ಬರುತ್ತಿದ್ದಾರೆ. ಇಲ್ಲಿಗೆ ಯಾಕೆ ಬರುತ್ತಾರೆ ಎಂಬುದನ್ನ ಜನರಿಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಸಿ ಬರಲಿ ಎಂದರು. ಇದನ್ನೂ ಓದಿ: ಈಶ್ವರ್ ಖಂಡ್ರೆ ಕಾಲಿಗೆ ಶರಣು- ಕಾಂಗ್ರೆಸ್ ಸೇರ್ತಾರಾ ಬಿಜೆಪಿ ಶಾಸಕ ಸಲಗರ್?

ಬಂಡ ರಾಜಕಾರಣ ಮಾಡುವುದನ್ನು ಹೆಬ್ಬಾರ್ ಬಿಡಲಿ. ಇವರು ಅಧಿಕಾರ ಇದ್ದಾಗ ಏನು ಮಾಡಿದ್ದಾರೆ ಎಂದು ಹೇಳಲಿ. ನಾನು 13 ವರ್ಷ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಎಲ್ಲರ ಜೊತೆ ಸೇರಿ ಪಕ್ಷದ ಸಂಘಟನೆಗೆ ಕೆಲಸ ಮಾಡಿದ್ದೇನೆ. ಆಗ ಇವರ ಕೊಡುಗೆ ಏನಿತ್ತು ಅಧಿಕಾರಕ್ಕೆ ಬಂದ ನಂತರ ಕ್ಷೇತ್ರಕ್ಕೆ ಇವರ ಕೊಡುಗೆ ಏನಿತ್ತು ಎಂಬುದು ಗೊತ್ತಿದೆ ಎಂದು ಕಿಡಿಕಾರಿದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್