‘ಚಿನ್ನದ ಮಲ್ಲಿಗೆ ಹೂವೇ’ ಚಿತ್ರಕ್ಕೆ ಅಣ್ಣಾವ್ರ ಮೊಮ್ಮಗ ನಾಯಕ

Public TV
1 Min Read

ಡಾ.ರಾಜ್ ಕುಮಾರ್ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದೆ. ನವಿಲುಗರಿ ನವೀನ್ ಪಿ.ಬಿ ನಿರ್ದೇಶನದ ಈ ಚಿತ್ರಕ್ಕೆ ಷಣ್ಮುಖ ಗೋವಿಂದರಾಜ್ (Shanmukh Govindaraj) ನಾಯಕ. ಈ ಸಿನಿಮಾಗೆ ‘ಚಿನ್ನದ ಮಲ್ಲಿಗೆ ಹೂವೇ’ (Chinnada maallige huve) ಎಂದು ಹೆಸರಿಡಲಾಗಿದೆ.

ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ  ‘ಸಾರಾ ವಜ್ರ’ ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ  ಆರ್‍ನಾ ಸಾಧ್ಯ (Arna Sadya) (ಶ್ವೇತಾ ಶೆಟ್ಟಿ) ಈ ಸಿನಿಮಾದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ ಚಿನ್ನದ ಮಲ್ಲಿಗೆ ಹೂವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ವೀರ ಮದಕರಿಯಲ್ಲಿ ಕಿಚ್ಚನ ಮಗಳಾಗಿ ನಟಿಸಿದ್ದ ಹುಡುಗಿ ಈಗ ಹೀರೋಯಿನ್

ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ತಮ್ಮ ಮುದ್ದಾದ ಅಕ್ಷರದ ಮೂಲಕ ಖ್ಯಾತ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಬರೆದುಕೊಟ್ಟರು. ನಟ ರಾಘವೇಂದ್ರ ರಾಜಕುಮಾರ್ ಶೀರ್ಷಿಕೆ ಅನಾವರಣ ಮಾಡಿದರು.  ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನವಿಲುಗರಿ ನವೀನ್ (Navilugari Naveen) ರಚನೆ ಹಾಗೂ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ.

 

ರಾಜಕುಮಾರ್ ಮೊಮ್ಮಗ (ಲಕ್ಷ್ಮೀ ಹಾಗೂ ಗೋವಿಂದರಾಜ್ ಅವರ ಪುತ್ರ) ಷಣ್ಮುಖ ಗೋವಿಂದರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ನಾಗೇಂದ್ರ ಪ್ರಸಾದ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ಪಾತ್ರಗಳ ಆಡಿಷನ್ ನಡೆಯುತ್ತಿದೆ. ಪ್ರಣವ್ ಸತೀಶ್ ಚಿನ್ನದ ಮಲ್ಲಿಗೆ ಹೂವೇ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು,  ಮಧು ತುಂಬಕೆರೆ ಅವರ ಸಂಕಲನವಿರಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್