ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ಸ್ವರಾ ಭಾಸ್ಕರ್

By
1 Min Read

ಬಾಲಿವುಡ್ (Bollywood) ನಟಿ ಸ್ವರಾ ಭಾಸ್ಕರ್ (Swara Bhaskar) ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಬೇಬಿ ಬಂಪ್ (Baby Bump) ಫೋಟೋಶೂಟ್‌ನಲ್ಲಿ ನಟಿ ಕಂಗೊಳಿಸಿದ್ದಾರೆ. ಹೊಸ ಲುಕ್‌ನಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಈಗ ಸದ್ದು ಮಾಡುತ್ತಿವೆ.

ಬ್ಲ್ಯಾಕ್ & ವೈಟ್ ಫೋಟೋ, ಕಲರ್‌ಫುಲ್ ಫೋಟೋಶೂಟ್‌ಗಳನ್ನ ನಟಿ ಹಂಚಿಕೊಂಡಿದ್ದಾರೆ. ಪತಿ ಫಹಾದ್ ಜೊತೆ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಇದನ್ನೂ ಓದಿ:ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್ ಶೆಟ್ಟಿ ದಂಪತಿ

ಸಮಾಜವಾದಿ ಪಕ್ಷದ ಲೀಡರ್ ಫಹಾದ್ ಅಹ್ಮದ್ ಅವರನ್ನು ಪ್ರೀತಿಸಿ ಸ್ವರಾ ಭಾಸ್ಕರ್ ಮದುವೆಯಾದರು. ಈ ವರ್ಷ ಫೆಬ್ರವರಿ 16ರಂದು ಫಹಾದ್ ಜೊತೆ ಹೊಸ ಬಾಳಿಗೆ ಕಾಲಿಟ್ಟರು. ಈಗ ಚೊಚ್ಚಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಮದುವೆಯಾಗಿ ಮೂರೇ ತಿಂಗಳಿಗೆ ತಾಯಿಯಾಗುವ ಮೂಲಕ ಸಿಹಿಸುದ್ದಿ ಹಂಚಿಕೊಂಡಿದ್ದರು. ಈ ವಿಚಾರವಾಗಿ ನಟಿ ಟ್ರೋಲ್ ಆಗಿದ್ದರು.

ಸಾಕಷ್ಟು ಸಿನಿಮಾಗಳ ಮೂಲಕ ಸ್ವರಾ ಸಂಚಲನ ಮೂಡಿಸಿದ್ದಾರೆ. ಸದ್ಯ ದಾಂಪತ್ಯದ ಕಡೆ ನಟಿ ಹೆಚ್ಚಿನ ಗಮನ ವಹಿಸುತ್ತಿದ್ದಾರೆ. ಹಾಗಾಗಿ ನಟನೆಯಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದಾರೆ. ವೀರೆ ದೇ ವೆಡ್ಡಿಂಗ್, ತನು ವೆಡ್ಸ್ ಮನು, ಫ್ಲೇಶ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸ್ವರಾ ನಟಿಸಿದ್ದಾರೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್